ಬೆಂಗಳೂರಲ್ಲಿ 282 ಪೊಲೀಸರಿಗೆ ಕೊರೊನಾ, 95 ಮಂದಿ ಗುಣಮುಖ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.4- ನಗರದಲ್ಲಿ ಇದುವರೆಗೂ 282 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರ ಪೈಕಿ 95 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಸೋಂಕಿಗೆ ಐದು ಮಂದಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸೋಂಕಿತ ಉಳಿದ ಸಿಬ್ಬಂದಿಗಳು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಯಾ ಠಾಣೆಗಳಲ್ಲಿ ರಾಸಾಯನಿಕ ಸಿಂಪಡಿಸಿ ಸೀಲ್‍ಡೌನ್ ಮಾಡಲಾಗಿದೆ.

ಬ್ಯಾಟರಾಯನಪುರ ಪೊಲೀಸ್ ಠಾಣೆಯ ಆರು ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಈ ಠಾಣೆಗೂ ಸಹ ರಾಸಾಯನಿಕ ಸಿಂಪಡಿಸಿ ಸೀಲ್‍ಡೌನ್ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಇದುವರೆಗೂ ಒಟ್ಟಾರೆ 469 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿರುವುದು ಖಾಕಿ ವಲಯದಲ್ಲಿ ಆತಂಕ ಉಂಟುಮಾಡಿದೆ.

Facebook Comments