3 ವರ್ಷಗಳ ಹಿಂದೆ ಎಟಿಎಂನಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದವ ಸಿಕ್ಕಿಬಿದ್ದ..?

ಈ ಸುದ್ದಿಯನ್ನು ಶೇರ್ ಮಾಡಿ

ATM--01

ಬೆಂಗಳೂರು, ಫೆ.4- ಕಳೆದ 3 ವರ್ಷಗಳ ಹಿಂದೆ ನಗರ ಜನತೆಯನ್ನು ಬೆಚ್ಚಿ ಬೀಳಿಸಿದ್ದ ಎಟಿಎಂನಲ್ಲಿ ಬ್ಯಾಂಕ್ ಮ್ಯಾನೇಜರ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ಆಂಧ್ರ ಪ್ರದೇಶದ ಮದನಪಲ್ಲಿಯಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮದನಪಲ್ಲಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಎಟಿಎಂನಲ್ಲಿ ಮಹಿಳೆ ಮೇಲಿನ ಹಲ್ಲೆ ಪ್ರಕರಣದ ಆರೋಪಿಯನ್ನು ಹೋಲುತ್ತಿದ್ದ ಬಗ್ಗೆ ಬಂದ ಮಾಹಿತಿ ಮೇರೆಗೆ ಕೇಂದ್ರ ವಿಭಾಗದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಆರೋಪಿಯ ಬಂಧನಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ 2 ತಿಂಗಳ ಕಾಲ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದರೂ ಆರೋಪಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.  ಪ್ರಕರಣವನ್ನು ಪೊಲೀಸರು ಛಾಲೆಂಜಿಂಗ್ ಆಗಿ ತೆಗೆದುಕೊಂಡು ತೀವ್ರ ತನಿಖೆ ನಡೆಸಿದಾಗ ಬೆಂಗಳೂರಿನ ಕೃತ್ಯಕ್ಕೂ ಮೊದಲು 15 ದಿನಗಳ ಹಿಂದೆ ಮದನಪಲ್ಲಿಯಲ್ಲೇ ಎಟಿಎಂನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.  ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ನೂತನ ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ಅವರು ಈ ಪ್ರಕರಣ ಸಂಬಂಧ ಚರ್ಚಿಸಿ ಆರೋಪಿಯ ಸೆರೆಗೆ ಸೂಚಿಸಿದ್ದರು ಎಂದು ತಿಳಿದು ಬಂದಿದೆ.

ಕಾರ್ಪೊರೇಷನ್ ವೃತ್ತದಲ್ಲಿನ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ 2013ರ ನ.19ರಂದು ಬೆಳಗ್ಗೆ 7.15ರ ಸುಮಾರಿನಲ್ಲಿ ಹಣ ಡ್ರಾ ಮಾಡಲು ಬಂದ ಕಾರ್ಪೊರೇಟರ್ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಉದಯ್ ಅವರ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಯೊಬ್ಬ ಹಣ, ಎಟಿಎಂ ಕಾರ್ಡ್‍ಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin