ಸಿಡಿಲಿಗೆ ಮನೆಯ ಮೇಲ್ಛಾವಣಿ ಕುಸಿದು ಮೂವರ ದುರ್ಮರಣ..!

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಜೂ.1- ನಿನ್ನೆ ಸುರಿದ ಭಾರೀ ಮಳೆ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಅಲ್ದಿಯಾ (12), ಶಪೀಕ್ (10), ಅಬಿದಾಭಿ (60) ಮೃತ ದುರ್ದೈವಿಗಳು.
ಕಾಳಗಿ ತಾಲೂಕಿನ ಕುಕನೂರು ಗ್ರಾಮದ ನಿವಾಸಿ ಅಬಿದಾಬಿ ನಿನ್ನೆ ರಾತ್ರಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಲು ಮಂಗಲಗಿ ಗ್ರಾಮಕ್ಕೆ ಬಂದಿದ್ದರು.

ಈ ಮೂವರು ಕೂಡ ಸಂಬಂಧಿಗಳಾಗಿದ್ದು, ರಾತ್ರೀ ಊಟ ಮಾಡಿ ಒಂದೇ ಮನೆಯಲ್ಲೇ ಮಲಗಿದ್ದರು. ತಡ ರಾತ್ರಿ ಸಿಡಿಲು ಬಡಿದ ಪರಿಣಾಮ ಮಲಗಿದ್ದವರ ಮೇಲೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಈ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವುದಲ್ಲದೇ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಕಾಳಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin