ಇಂಡಿ ತಾಲ್ಲೂಕಿನ ಝಳಕಿ ಬಳಿ ಸರಣಿ ಅಪಘಾತ, ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01

ವಿಜಯಪುರ,ಜ.31- ಎರಡು ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಇಂಡಿ ತಾಲ್ಲೂಕಿನ ಝಳಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದೆ. ನಂತರ ಹಿಂಬದಿಯಿಂದ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ.

ಲಾರಿಗಳ ಮುಖಾಮುಖಿಯಾಗಿದ್ದರಿಂದ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟರೆ, ಕ್ಲೀನರ್ ಲಾರಿ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

ಅಪಘಾತ ಸಂಭವಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಎರಡೂ ಬದಿಯಲ್ಲಿ ವಾಹನಗಳು ಕಿ.ಮೀಗಟ್ಟಲೇ ಸಾಲುಗಟ್ಟಿ ನಿಂತಿದ್ದವು.

ಸುದ್ದಿ ತಿಳಿದ ಸಂಚಾರಿ ಪೊಲೀಸರು ಸ್ಥಳಕ್ಕಾಮಿಸಿ ಲಾರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin