ಯಲ್ಲಾಪುರ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Yallapur--01
ಕಾರವಾರ, ಜೂ.26- ಅತಿ ವೇಗವಾಗಿ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲ್ಲಾಪುರ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿನಾಯಕ ಹೆಗಡೆ (40), ಅರ್ಚನಾ (35), ಶ್ರಾವಣಿ (3) ಎಂದು ಗುರುತಿಸಲಾಗಿದೆ. ಮತ್ತೊಂದು ಮಗು ಯಶಸ್ವಿನಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಕಾರಿನಲ್ಲಿ ಒಂದೇ ಕುಟುಂಬದ ಈ ನಾಲ್ವರು ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದಾಗ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಚಿಕ್ಕಮಾವಳ್ಳಿ ಗ್ರಾಮದ ಸಮೀಪ ಅತಿ ವೇಗವಾಗಿ ಮುನ್ನುಗ್ಗಿದ ಲಾರಿ ಇವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ದಂಪತಿ ಹಾಗೂ ಮಗು ಎಂದು ಹೇಳಲಾಗುತ್ತಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ.
ಯಲ್ಲಾಪುರ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin