ಪೊಲೀಸರನ್ನೇ ಗುಂಡಿಕ್ಕಿ ಕೊಂದ ಜಿಂಕೆ ಬೇಟೆಗಾರರು..!

ಈ ಸುದ್ದಿಯನ್ನು ಶೇರ್ ಮಾಡಿ

ಭೋಪಾಲ್, ಮೇ 14- ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ರಾಜ್ಯ ರಾಜಧಾನಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಅರಾನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಮುಂಜಾನೆ 3 ಗಂಟೆಯ ಸುಮಾರಿಗೆ ತಮ್ಮನ್ನು ಹಿಡಿಯಲು ಬಂದ ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಅಪರೂಪದ ಜಾತಿಯ ನಾಲ್ಕು ಜಿಂಕೆಗಳನ್ನು ಬೇಟೆಯಾಡಿ ಕೊಂದಿರುವ ಮಾಹಿತಿ ತಿಳಿದು ಪೊಲೀಸರು ಗುನಾ ಜಿಲ್ಲೆಯ ಅರೋನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದ ಸ್ಥಳಕ್ಕೆ ತಲುಪಿದ್ದಾರೆ. ಪೊಲೀಸರು ಎಲ್ಲಾ ಕಡೆಯಿಂದ ಸುತ್ತುವರೆದಾಗ ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಗುಂಡು ಹಾರಿಸಲು ಪ್ರಾರಂಭಿಸಿದರು, ಗುಂಡು ತಗುಲಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ರಾಜ್ ಕುಮಾರ್ ಜಾತವ್ ಮತ್ತು ಇಬ್ಬರು ಕಾನ್ಸ್‍ಟೆಬಲ್‍ಗಳಾದ ನಿಲೇಶ್ ಭಾರ್ಗವ ಮತ್ತು ಶಾಂತಾರಾಮ್ ಮೀನಾ ಸಾವನ್ನಪ್ಪಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ನಿವಾಸದಲ್ಲಿ ಬೆಳಿಗ್ಗೆ ಉನ್ನತ ಮಟ್ಟದ ತುರ್ತು ಸಭೆ ನಡೆಸಿದ್ದಾರೆ.

Facebook Comments