ಕಾಶ್ಮೀರದ ಆನಂತ್‍ನಾಗ್ ಜಿಲ್ಲೆಯಲ್ಲಿ ಸೇನೆ ಗುಂಡಿಗೆ ಮೂವರು ಉಗ್ರರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ್,ಮೇ.11-ಜಮ್ಮು-ಕಾಶ್ಮೀರದ ಆನಂತ್‍ನಾಗ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.

ಕೋಮೆರ್‍ನಾಗ್ ಪ್ರಾಂತ್ಯದ ವೈಲೂ ಗ್ರಾಮದಲ್ಲಿ ಉಗ್ರರು ಆಡಗಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯ ಕೈಗೊಂಡಿದ್ದರು.

ಈ ಸಂದರ್ಭದಲ್ಲಿ ಭದ್ರತಾಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿಗೆ ಮುಂದಾದರೂ ಇದಕ್ಕೆ ಪ್ರತಿದಾಳಿ ನಡೆಸಿದಾಗ ಮೂವರು ಉಗ್ರರು ಬಲಿಯಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Facebook Comments

Sri Raghav

Admin