ಬ್ರೇಕಿಂಗ್ : ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಇನ್ನಿಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.21-ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್(81) ಇಂದು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಶೀಲಾ ದೀಕ್ಷಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಮಹಿಳಾ ಮುಖ್ಯಮಂತ್ರಿಯಾಗಿ ಸುಮಾರು 15 ವರ್ಷಗಳ ಕಾಲ ಸುದೀರ್ಘ ಆಡಳಿತ ನಡೆಸಿದ ಶೀಲಾ ದೀಕ್ಷಿತ್ ಅವರು 1998ರಿಂದ 2013ರವರೆಗೂ ದೆಹಲಿ ಮುಖ್ಯಮಂತ್ರಿಯಾಗಿದ್ದ ಹೆಗ್ಗಳಿಕೆ ಇವರದು.

1938ರ ಮಾರ್ಚ್ 31ರಂದು ಪಂಜಾಬ್‍ನ ಕಪೂರ್ತಲಾದಲ್ಲಿ ಜನಿಸಿದ ಇವರು ಉತ್ತರ ಪ್ರದೇಶದ ಕನೋಜಾ ಕ್ಷೇತ್ರದಿಂದ 1984-1989ರಲ್ಲಿ ಸ್ಪರ್ಧಿಸಿದ್ದರು. ಇಲ್ಲಿಂದ ಆರಂಭವಾದ ಅವರ ರಾಜಕೀಯ ಜೀವನ ಮುಂದೆ ಹಲವಾರು ಘಟ್ಟಗಳಲ್ಲಿ ಸಾಗಿ ದೆಹಲಿ ಮುಖ್ಯಮಂತ್ರಿಯಾಗಿ ಮೂರು ಬಾರಿ ಆಯ್ಕೆಯಾಗಿದ್ದರು.

ಶೀಲಾ ದೀಕ್ಷಿತ್ ಅವರು 1998ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಇವರು 2003ರಲ್ಲಿ ಪಕ್ಷವನ್ನು ಗೆಲ್ಲಿಸಿ ಎರಡನೇಯ ಬಾರಿಗೆ ಮುಖ್ಯಮಂತ್ರಿ ಪದವಿಯನ್ನು ಅಲಂಕರಿಸಿದರು.

2008ರಲ್ಲಿ ನಡೆದ ರಾಜ್ಯ ವಿಧಾನಸಭೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕಿಯಾದ ಇವರು ಮೂರನೇಯ ಬಾರಿಗೆ ಮುಖ್ಯಮಂತ್ರಿ ಪದವಿಯನ್ನು ಅಲಂಕರಿಸಿ ದಾಖಲೆ ಸೃಷ್ಟಿಸಿದರು.

ಆದರೆ 2013 ರ ದೆಹಲಿ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ನವದೆಹಲಿ ಮತಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇವರನ್ನು ಸೋಲಿಸಿ ಮುಖ್ಯಮಂತ್ರಿಯಾದರು. ಕೇರಳದ ರಾಜ್ಯಪಾಲರಾಗಿ 11 ಮಾರ್ಚ್ 2014 ರಂದು ಅಧಿಕಾರ ವಹಿಸಿಕೊಂಡರು . ಆದರೆ 25 ಆಗಸ್ಟ್ 2014ರಂದು ಆ ಪದವಿಗೆ ರಾಜೀನಾಮೆ ನೀಡಿದರು.

Facebook Comments

Sri Raghav

Admin