ವಾಹನ ಡಿಕ್ಕಿ ಹೊಡೆದು ಮಾರ್ನಿಂಗ್ ವಾಕ್ ಮಾಡುತ್ತಿದ್ದ 3 ಮಹಿಳೆಯರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಪುಣೆ, ಮೇ 15-ಬೆಳಗಿನ ವಾಯುವಿಹಾರ ಮೂವರು ಮಹಿಳೆಯರಿಗೆ ಮೃತ್ಯುವಾಗಿ ಪರಿಣಮಿಸಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಹಮದ್‍ನಗರ್-ಕಲ್ಯಾಣ್ ಹೆದ್ದಾರಿಯ ಜುನ್ನಾರ್ ತಹಸೀಲ್‍ನ ಉದಾಪುರ್ ಗ್ರಾಮದ ಬಳಿ ಮುಂಜಾನೆ 5.30 ರಿಂದ 6 ಗಂಟೆ ನಡುವೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಮಹಿಳೆಯರು ಮಾರ್ನಿಂಗ್ ವಾಕ್ ಮಾಡುತ್ತಿದ್ದಾಗ ಯಾವುದೋ ವಾಹನ ಇವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ದುರ್ಘಟನೆಯಲ್ಲಿ ಎಲ್ಲ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಒಟೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ