ನ್ಯೂಯಾರ್ಕ್‌ ನಿಂದ ಬೆಂಗಳೂರಿಗೆ ಬಂದಿಳಿದ 310 ಪ್ರಯಾಣಿಕರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು. ಮೇ 26 : ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಅಮೇರಿಕಾದ ನ್ಯೂಯಾರ್ಕ್ ನಿಂದ ಇಂದು (ಮೇ 26) ಮಧ್ಯಾಹ್ನ 3.05 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹತ್ತೊಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ 310 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ‘

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 310 ಮಂದಿ ಪ್ರಯಾಣಿಕರಲ್ಲಿ 04 ಗರ್ಭಿಣಿಯರು, ಒಂದು ಮಗು ಸೇರಿದಂತೆ 184 ಪುರುಷರು ಮತ್ತು 126 ಮಹಿಳೆಯರು ಇದ್ದಾರೆ.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 310 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

310 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

Facebook Comments

Sri Raghav

Admin