ಸ್ಯಾನ್‍ಫ್ರಾನ್ಸಿಸ್ಕೊ, ಮಸ್ಕಟ್, ದಮಮ್‍ನಿಂದ ಬೆಂಗಳೂರಿಗೆ ಬಂದ 317 ಅನಿವಾಸಿ ಭಾರತೀಯರು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 21- ಅಮೆರಿಕಾದ ಸ್ಯಾನ್‍ಫ್ರಾನ್ಸಿಸ್ಕೊ, ಮಸ್ಕಟ್ ಹಾಗೂ ದಮಮ್‍ನಿಂದ ಒಟ್ಟು 317 ಅನಿವಾಸಿ ಭಾರತೀಯರು ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಅಮೇರಿಕಾದ ಸ್ಯಾನ್ ಫ್ರಾನ್ಸಿಸ್ಕೊದಿಂದ ಇಂದು ಬೆಳಿಗ್ಗೆ 8ನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 117 ಮಂದಿ ಅನಿವಾಸಿ ಭಾರತೀಯರು ಪ್ರಯಾಣಿಸಿದ್ದಾರೆ. ಮಸ್ಕಟ್ ಹಾಗೂ ದಮಮ್‍ನಿಂದ ನಿನ್ನೆ ರಾತ್ರಿ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಟ್ಟು 200 ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಸ್ಕ್ಯಾನ್‍ಫ್ರಾನ್ಸಿಸ್ಕೊದಿಂದ ಏರ್‍ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 117 ಮಂದಿಯಲ್ಲಿ 50 ಪುರುಷ ಮತ್ತು 67 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಬಳಿಕ ಏರ್ ಇಂಡಿಯಾ ವಿಮಾನವು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು.

ಸರ್ಕಾರದ ನಿರ್ದೇಶನದಂತೆ, 117 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ತಿಳಿಸಿದ್ದಾರೆ.117 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಭರಿಸಲಿದ್ದಾರೆ ಎಂದಿದ್ದಾರೆ. ದಮಮ್‍ನಿಂದ ಬಂದ 85 ಹಾಗೂ ಮಸ್ಕಟ್‍ನಿಂದ 115 ಪ್ರಯಾಣಿಕರು ಆಗಮಿಸಿದ್ದಾರೆ.

ದಮಮ್‍ನಿಂದ ಬಂದ ಪ್ರಯಾಣಿಕರಲ್ಲಿ ಒಬ್ಬರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗಾಗಿ ನಿಗದಿತ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ಮಸ್ಕಟ್‍ನಿಂದ ಬಂದ ಆರನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 115 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಉಳಿದ ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರೋಗ್ಯ ತಪಾಸಣೆಯ ಬಳಿಕ ಎಲ್ಲಾ 115 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗಿದೆ.

ಹಾಗೆಯೇ ದಮಮ್‍ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 85 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಈ ಪ್ರಯಾಣಿಕರಲ್ಲಿ ಆರು ಗರ್ಭಿಣಿಯರು, ಹತ್ತು ವರ್ಷದೊಳಗಿನ ನಾಲ್ಕು ಮಕ್ಕಳು ಸೇರಿದಂತೆ 67 ಪುರುಷರು ಮತ್ತು 18 ಮಹಿಳೆಯರು ಇದ್ದಾರೆ.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 85 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಒಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರನ್ನು ನಿಗದಿತ ಆಸ್ಪತ್ರೆಗೆ ಕ್ವಾರಂಟೈನ್ ಗಾಗಿ ಕಳುಹಿಸಿಕೊಡಲಾಗಿದೆ. ಉಳಿದ 84 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್‍ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin