ರಾಜ್ಯದಲ್ಲಿ ಕೋವಿಡ್ ಆರ್ಥಿಕ ಸಂಕಷ್ಟ ನಿರ್ವಹಣೆಗೆ 33,000 ಕೋಟಿ ಸಾಲ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.15- ರಾಜ್ಯದಲ್ಲಿ ಈ ಬಾರಿ ಕೋವಿಡ್‍ನಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಕೈಕೊಟ್ಟ ಹಿನ್ನೆಲೆಯಲ್ಲಿ ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಿ 33 ಸಾವಿರ ಕೋಟಿ ರೂ. ಸಾಲ ಪಡೆಯುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ.

ಕರ್ನಾಟಕ ಆರ್ಥಿಕ ಹೊಣೆಗಾರಿಕೆ ವಿಧೇಯಕ 2020 ಕಾಯ್ದೆಗೆ ತಿದ್ದುಪಡಿ ಮಾಡಿ ವಿವಿಧ ಮೂಲಗಳಿಂದ 33 ಸಾವಿರ ಕೋಟಿ ಸಾಲ ಪಡೆಯಲಾಗುವುದು. ಆರ್ಥಿಕ ವಿತ್ತೀಯ ಕೊರತೆಯ ಇತಿಮಿತಿಯಲ್ಲೇ ಸಾಲ ಪಡೆಯಲು ಸರ್ಕಾರ ನಿರ್ಧರಿಸಿದೆ.

ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ವಿವಿಧ ಮೂಲಗಳಿಂದ ಬರಬೇಕಿದ್ದ ಆದಾಯ ನಿರೀಕ್ಷಿತ ಮಟ್ಟದಲ್ಲಿ ಸಂಗ್ರಹಣೆಯಾಗಿಲ್ಲ.

ಅಲ್ಲದೆ ಕೇಂದ್ರ ಸರ್ಕಾರ ನೀಡಬೇಕಿದ್ದ ಜಿಎಸ್‍ಟಿ ಅನುದಾನದಲ್ಲಿ ಕೊರತೆಯಾಗಿದೆ. ಹೀಗಾಗಿ ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ತೀರ್ಮಾನಿಸಲಾಗಿದೆ ಎಂದರು.

Facebook Comments

Sri Raghav

Admin