362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ನೀಡಿದ್ದ ತಡೆಯಾಜ್ಞೆ ಮುಂದುವರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

KPSC

ಬೆಂಗಳೂರು,ಜೂ.21-ಕರ್ನಾಟಕದ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದಿಂದ ನೇಮಕವಾಗಿದ್ದ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಮತ್ತೆ ಮುಂದುವರೆಸಿದೆ. ಮುಂದಿನ ಆದೇಶದವರೆಗೂ ನೇಮಕಾತಿ ಆದೇಶ ನೀಡಬಾರದೆಂದು ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ.  ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಅಂತಿಮ ವಿಚಾರಣೆ ಮುಗಿಯುವರೆಗೂ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡದಂತೆ ತೀರ್ಪು ನೀಡಿತ್ತು. ೨೦೧೧ರಲ್ಲಿ ರಾಜ್ಯ ಸರ್ಕಾರ 362 ವಿವಿಧ ಶ್ರೇಣಿಯ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳನ್ನು ನೇಮಕ ಮಾಡಿಕೊಂಡಿತ್ತು. ಆದರೆ ನೇಮಕಾತಿಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಅಧಿಸೂಚನೆಯನ್ನೇ ರದ್ದುಪಡಿಸಿತ್ತು.

ಸಾಕಷ್ಟು ವಿವಾದ ಸೃಷ್ಟಿಸಿದ್ದ ಈ ಪ್ರಕರಣದಲ್ಲಿ ಸರ್ಕಾರ ದುರುದ್ದೇಶಪೂರ್ವಕವಾಗಿಯೇ ಅಧಿಸೂಚನೆಯನ್ನು ರದ್ದುಪಡಿಸಿದೆ ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಆರೋಪಿಸಿದ್ದರು. ಕೊನೆಗೆ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರದ್ದುಪಡಿಸಿದ್ದ ಅಧಿಸೂಚನೆಯನ್ನು ಸರ್ಕಾರ ಹಿಂಪಡೆದಿತ್ತು. ನೇಮಕಾತಿಯಲ್ಲಿ ಗೋಲ್‍ಮಾಲ್ ನಡೆದಿದೆ ಎಂದು ಅಭ್ಯರ್ಥಿಗಳು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರಿಂದ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin