39 ಗ್ರಾಮಗಳಿಗೆ ಹೇಮಾವತಿ ನಾಲೆಯಿಂದ ನೀರು : ಟಿ.ಬಿ.ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

jayachandra

ಗುಬ್ಬಿ, ಆ.27- ಗ್ರಾಮೀಣ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಸದುದ್ದೇಶದಿಂದ ತಾಲ್ಲೂಕಿನ 39 ಗ್ರಾಮಗಳ ಕೆರೆಗಳಿಗೆ ಹೇಮಾವತಿ ನಾಲೆಯಿಂದ ನೀರು ಪೂರೈಕೆ ಮಾಡಲು 78 ಕೋಟಿ ರೂವೆಚ್ಚದಲ್ಲಿ 7 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಈಗಾಗಲೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರುಪಟ್ಟಣದ ಪ್ರವಾಸಿ ಮಂದಿರಲ್ಲಿ ತಾಲ್ಲೂಕಿನಾಧ್ಯಂತ ನಡೆಯುತ್ತಿರುವ ಹೇಮಾವತಿ ನಾಲಾ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಚೇಳೂರು ಕುಡಿಯುವ ನೀರಿನ ಯೋಜನೆ, ಕೊಡಿಯಾಲ ಕುಡಿಯುವ ನೀರಿನ

ಯೋಜನೆ, ಮತ್ತಿಕೆರೆ, ಎಂ.ಹೊಸಹಳ್ಳಿ, ಶಿವನೇಹಳ್ಳಿ ಗ್ರಾಮಗಳ ಕುಡಿಯುವ ನೀರಿನ ಯೋಜನೆ, ಅಳಿಲುಘಟ್ಟ, ಹೊಸಕೆರೆ, ಹಾಗಲವಾಡಿ, ಶಿವಸಂದ್ರ, ಬಿಕ್ಕೇಗುಡ್ಡ ಗ್ರಾಮದ ಕುಡಿಯುವ ನೀರಿನ ಯೋಜನೆಗಳ ಪರಿವೀಕ್ಷಣೆ ನಡೆಸಲಾಗಿದ್ದು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.ತಾಲ್ಲೂಕಿನ ಶಿವಸಂದ್ರ ಯೋಜನೆ ಕಾಮಗಾರಿ ಈಗಾಗಲೆ ಸಂಪೂರ್ಣವಾಗಿ ಪೂರ್ಣಗೊಂಡಿದ್ದು ಬೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸಿ ವಿದ್ಯುತ್ ಸಂಪರ್ಕ ಕಲ್ಪಿಸಿ 15 ದಿನಗಳಲ್ಲಿ ಈ ಯೋಜನೆಯನ್ನು ಕಾರ್ಯಾರಂಭ ಮಾಡಲಾಗುವುದು ಎಂದು ಹೇಳಿದರು.

ಹೇಮಾವತಿ ಎಡದಂಡೆ ನಾಲೆಯಿಂದ ಒಂದು ಲಕ್ಷ ಎಕರೆ ಜಮೀನಿಗೆ ನೀರಾವರಿ ಒದಗಿಸುವ ಮತ್ತು ಕೃಷಿಗೆ 1675 ಕ್ಯೊಸೆಕ್ಸ್ ನೀರು ಹರಿಸುವ ಸಾಮಥ್ರ್ಯದ ನಾಲೆ ಒದಗಿಸಲು ಉದ್ದೇಶಿಸಲಾಗಿದ್ದು, ತಾಲ್ಲೂಕಿನ ಚೇಳುರು, ಹಾಗಲವಾಡಿ ಸೇರಿದಂತೆ ಇತರೆ ಕಡೆಗಳಲ್ಲಿ ಒಟ್ಟು 7 ಕಾಮಗಾರಿಗಳು ನಡೆಯುತ್ತಿದ್ದು ಕಾಮಗಾರಿಗಳ ಪರಿವೀಕ್ಷಣೆ ನಡೆಸಿ ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದರು.ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ, ಕೆಪಿಸಿಸಿ ಸದಸ್ಯ ಕೆ.ಆರ್.ತಾತಯ್ಯ, ಎಸ್.ರಾಜಣ್ಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಂಕರಾನಂದ್ ಮುಂತಾದವರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin