4ನೇ ಬಾರಿ ರಷ್ಯಾ ಅಧ್ಯಕ್ಷರಾಗಲು ಸ್ವತಂತ್ರ ಅಭ್ಯರ್ಥಿಯಾಗಿ ಪುಟಿನ್ ಕಣಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Putin--02

ಮಾಸ್ಕೋ, ಡಿ.15-ನಾಲ್ಕನೇ ಬಾರಿ ರಷ್ಯಾ ಅಧ್ಯಕ್ಷರಾಗಲು ಬಯಸಿರುವ ರಾಷ್ಟ್ರನಾಯಕ ವ್ಲಾಡಿಮಿರ್ ಪುಟಿನ್, ಮುಂದಿನ ವರ್ಷ ಮಾರ್ಚ್‍ನಲ್ಲಿ ನಡೆಯುವ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಾ ಕಣಕ್ಕೆ ಇಳಿಯುವುದಾಗಿ ಘೋಷಿಸಿದ್ದಾರೆ. ರಾಜಧಾನಿ ಮಾಸ್ಕೋದಲ್ಲಿ ನಿನ್ನೆ ರಾತ್ರಿ ಬೃಹತ್ ಸುದ್ಧಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 2018ರ ಮಾರ್ಚ್‍ನಲ್ಲಿ ನಡೆಯುವ ಸಂಸತ್ ಚುನಾವಣೆಯಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಂಬರುವ ಚುನಾವಣೆಯಲ್ಲಿ ತಮ್ಮ ಯುನೈಟೆಡ್ ರಷ್ಯಾ ಪಕ್ಷದ ಬೆಂಬಲ ಪಡೆಯುವುದಿಲ್ಲ ಎಂದು ಘೋಷಿಸಿದರು.  ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದ 1,600ಕ್ಕೂ ಹೆಚ್ಚು ಪ್ರತಿನಿಧಿಗಳು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.   ರಷ್ಯಾದ ಬೇಹುಗಾರಿಕೆ ಸಂಸ್ಥೆ ಕೆಜಿಬಿ ಅಧಿಕಾರಿಯಾಗಿದ್ದ ಪುಟಿನ್ 1999ರಿಂದಲೂ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರು ನಾಲ್ಕನೇ ಬಾರಿ ಪುನರಾಯ್ಕೆಯಾದರೆ, ಜೋಸೆಫ್ ಸ್ಟಾಲಿನ್ ಬಳಿಕ ಅತಿ ಹೆಚ್ಚು ಅವಧಿಗೆ ರಷ್ಯಾದಲ್ಲಿ ಅಧಿಕಾರದಲ್ಲಿದ್ದ ರಾಷ್ಟ್ರನಾಯಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.

Facebook Comments

Sri Raghav

Admin