4 ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ನೌಕರರ ಧರಣಿ, 190ಕ್ಕೂ ಹೆಚ್ಚು ಜನ ಅಸ್ವಸ್ಥ

ಈ ಸುದ್ದಿಯನ್ನು ಶೇರ್ ಮಾಡಿ

Anganavadi-2

ಬೆಂಗಳೂರು,ಮಾ.23-ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಲ್ಲಿ 190ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.   ಇಂದು ಬೆಳಗ್ಗೆ ಅಸ್ವಸ್ಥರಾದ ರೇಣುಕಾ(30) ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ವೇತನ ಹೆಚ್ಚಳ , ಸೇವಾ ನಿಯಮಾವಳಿ ಸರಳೀಕರಣಕ್ಕೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್ ಬಳಿ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪೈಕಿ 190 ಜನ ಅಸ್ವಸ್ಥರಾಗಿದ್ದು , ಹಲವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಸುನಂದ, ಜಯಮ್ಮ ಎಂಬುವರನ್ನು ಕಳೆದ ಎರಡು ದಿನಗಳ ಹಿಂದೆ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚೇತರಿಸಿಕೊಂಡಿದ್ದು ಮತ್ತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.   ಸುಮಾರು 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು , ಬಿಸಿಲಿನ ಝಳ, ಕುಡಿಯುವ ನೀರಿನ ಕೊರತೆ, ಆಹಾರದ ವ್ಯತ್ಯಯ, ನಿದ್ದೆಯ ಅಭಾವದಿಂದ ಹಲವರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.  ಈ ಕಾರಣದಿಂದ ಸುಮಾರು 190 ಮಂದಿ ಅಸ್ವಸ್ಥರಾಗಿದ್ದು , ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳದಲ್ಲೇ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಕುಡಿಯುವ ನೀರಿಗಾಗಿ ವಾಟರ್ ಟ್ಯಾಂಕ್‍ಗಳನ್ನು ಒದಗಿಸಲಾಗಿದೆ. ತಾತ್ಕಾಲಿಕ ಶೌಚಾಲಯಗಳನ್ನು ಕಲ್ಪಿಸಲಾಗಿದೆ.   ಯಾವುದೇ ರೀತಿಯ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin