ನಿರ್ಮಾಣ ಹಂತದ ಫ್ಲೈಓವರ್ ಕುಸಿದು ಹಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Flyover--01

ಲಖನೌ, ಆ.11- ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆ ಕುಸಿದು ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬಸ್ತಿಯಲ್ಲಿ ಇಂದು ಬೆಳಗಿನ ಜಾವ ಮೇಲ್ಸೇತುವೆ ಕುಸಿದು ಬಿದ್ದು ಹಲವರು ಗಾಯಗೊಂಡಿದ್ದು, ಅನೇಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.  ಮೇಲ್ಸೇತುವೆ ಕುಸಿದ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕದಳದವರು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಮೇಲ್ಸೇತುವೆಯ ಕಾಮಗಾರಿಯು ಶೇ. 90ರಷ್ಟು ಮುಗಿದಿದ್ದು ಶೀಘ್ರದಲ್ಲೇ ಇದರ ಉದ್ಘಾಟನೆಯಾಗಲಿತ್ತು ಆದರೆ ಇಂದು ಫ್ಲೈಓವರ್ ಕುಸಿದು ಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ, ಅಲ್ಲದೆ ಈ ದುರಂತ ಬೆಳಗ್ಗೆ ಸಂಭವಿಸಿರುವುದರಿಂದ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin