ಕೆಎಸ್​​ಆರ್​ಟಿಸಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ : ರಾಜ್ಯ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ಸಂಭವಿಸಿರುವ ಮುಖಾಮುಖಿ ಡಿಕ್ಕಿಯಲ್ಲಿ ಬೆಳಗಾವಿ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಪೊಲೀಸ ಠಾಣಾ ವ್ಯಾಪ್ತಿಯ ಚಚಡಿ ಕ್ರಾಸ್ ಹತ್ತಿರ ಭಾನುವಾರ ಸಂಜೆ ನಡೆದಿದೆ.

ಗೋವಾ ರಾಜ್ಯದ ವಾಸ್ಕೋದಿಂದ ಇಲಕಲ್‍ಗೆ ಹೊರಟ ರಾಜ್ಯ ಸಾರಿ ಇಲಾಖೆಯ ಬಸ್ಸು ಹಾಗೂ ಯರಗಟ್ಟಿಯಿಂದ ಬೆಳಗಾವಿಗೆ ಬರುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಫಘಾತದಲ್ಲಿ ಮೃತಪಟ್ಟವರು ಬೆಳಗಾವಿಯವರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರು ಬಸ್‍ನ ಕೆಳ ಭಾಗದಲ್ಲಿ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಲ್ಲದೆ ಬಸ್ಸಿನ ಕೆಳಗೆ ಸಿಲುಕಿಕೊಂಡಿರುವ ಕಾರನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಮಾಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ತಿಳಿಸಿದ್ದಾರೆ.

ಆದರೆ ಮೃತರ ಹೆಸರುಗಳು ಮಾತ್ರ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸೌದತ್ತಿ ಸಿಪಿಐ ಮಂಜುನಾಥ ನಡುವಿನಮನಿ ಸೇರಿದಂತೆ ಸಿಬ್ಬಂದಿಗಳು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

Facebook Comments

Sri Raghav

Admin