ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ವರು ಯುವಕರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಬೀದರ್, ಮೇ 19- ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹುಮ್ನಾ ಬಾದ್ ತಾಲ್ಲೂಕಿನ ಮಂಗಲಗಿ ಸಮೀಪ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 65ರಲ್ಲಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು , ಮೃತರನ್ನು ಸಚಿನ್ ಹಣಮಂತ, ಅರುಣ್ಕುಮಾರ್ ಕಾಶಿನಾಥ, ಗುರುನಾಥ ವಿಠಲ ಹಾಗೂ ರಘುವೀರ ಭೀಮಶ್ಯ ಎಂದು ತಿಳಿದು ಬಂದಿದೆ.

ಹುಟ್ಟುಹಬ್ಬದ ಪಾರ್ಟಿಗಾಗಿ ಇವರೆಲ್ಲರೂ ಇಲ್ಲಿ ಸೇರಿದ್ದರು ಎಂದು ತಿಳಿದು ಬಂದಿದೆ. ರಸ್ತೆ ಪಕ್ಕದಲ್ಲಿ ಅವರು ರಸ್ತೆ ಪಕ್ಕದಲ್ಲಿ ಅವರು ಸಂಭ್ರಮಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಸ್ಥಳೀಯರೊಬ್ಬರು ಈ ಘಟನೆ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು , ಮುನ್ನಾಖೇಡ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin