40 ಮಂದಿ ಹೋರಾಟಗಾರರ ಮೇಲೆ ಎಫ್‍ಐಆರ್ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

FIRR

ಮಂಡ್ಯ, ಸೆ.10- ಕರ್ತವ್ಯನಿರತ ಮೂವರು ಗೃಹ ರಕ್ಷಕ ದಳ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆಂಬ ಕಾರಣಕ್ಕೆ 40 ಮಂದಿ ಕಾವೇರಿ ಹೋರಾಟಗಾರರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ತಾಲೂಕಿನ ಕೆರಗೋಡು ಬಸ್ ನಿಲ್ದಾಣದ ಬಳಿ ಇರುವ ಸರ್ಕಲ್‍ನಲ್ಲಿ ಹೋರಾಟಗಾರರು ಟಯರ್‍ಗೆ ಬೆಂಕಿ ಹಚ್ಚಿ ತಮಿಳುನಾಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಮುಂದಾದಾಗ ಘಟನೆಯನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ ಗೃಹ ರಕ್ಷಕ ದಳ ಸಿಬ್ಬಂದಿ ಹಾಗೂ ಹೋರಾಟಗಾರರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಹಲ್ಲೆ ನಡೆಸಿದ್ದಾರೆಂದು ಗೃಹ ರಕ್ಷಕ ದಳದ ಸಿಬ್ಬಂದಿ ಬೋರೇಗೌಡ, ಪ್ರಶಾಂತ್ ಹಾಗೂ ವೆಂಕಟಮ್ಮ ದೂರು ನೀಡಿದ್ದಾರೆ.  ಕೆರಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin