400ಕ್ಕೂ ಹೆಚ್ಚು ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‍ಗಳ ಮೇಲೆ ಕೇಂದ್ರದಿಂದ ಸ್ಟಿಂಗ್ ಆಪರೇಷನ್

ಈ ಸುದ್ದಿಯನ್ನು ಶೇರ್ ಮಾಡಿ

Sting-Operation

ನವದೆಹಲಿ ,ಡಿ.12-ನೋಟು ರದ್ದತಿ ನಂತರ ಕಾಳಧನಿಕರೊಂದಿಗೆ ಶಾಮೀಲಾಗಿರುವ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‍ಗಳ ಮೇಲೆ ಸ್ಟಿಂಗ್ ಆಪರೇಷನ್(ಕುಟುಕು ಕಾರ್ಯಾಚರಣೆ) ನಡೆಸುತ್ತಿದೆ. ಕಪ್ಪು ಹಣವನ್ನು ಬಿಳಿ ಮಾಡಲು ಕಾಳಧನಿಕರೊಂದಿಗೆ ಹಲವಾರು ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್‍ಗಳು ಶಾಮೀಲಾಗಿ ಕೋಟ್ಯಂತರ ರೂ. ಅಕ್ರಮ ವಹಿವಾಟು ಮತ್ತು ಹವಾಲಾ ವ್ಯವಹಾರ ನಡೆಸುತ್ತಿರುವ ಸಂಬಂಧ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ದೇಶದ ವಿವಿಧೆಡೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಅಕ್ರಮಗಳನ್ನು ಬಯಲಿಗೆಳೆದಿದ್ದರು.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ, ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್‍ಗಳ ಮೇಲೆ ಹದ್ದಿನಕಣ್ಣಿನ ನಿಗಾ ಇಟ್ಟಿರುವ ಹಣಕಾಸು ಸಚಿವಾಲಯ ರಹಸ್ಯವಾಗಿ ಅವುಗಳನ್ನು ಮಾಹಿತಿಗಳನ್ನು ಸಂಗ್ರಹಿಸಿದೆ. ಇದಕ್ಕೆ ಸಂಬಂಧಪಟ್ಟಂತೆ 400ಕ್ಕೂ ಹೆಚ್ಚು ಸಿಡಿಗಳು ವಿತ್ತ ಇಲಾಖೆ ಕೈ ಸೇರಿದ್ದು , ಮುಂದಿನ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ಸೂಚನೆ ಮೇರೆಗೇ ಈ ಕುಟುಕು ಕಾರ್ಯಾಚರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಸ್ಟಿಂಗ್ ಆಪರೇಷನ್‍ನಿಂದ ಮತ್ತಷ್ಟು ಅಕ್ರಮ ಪ್ರಕರಣಗಳು ಪತ್ತೆಯಾಗಿ ಬ್ಯಾಂಕ್‍ನ ಉನ್ನತ ಅಧಿಕಾರಿಗಳು ಜೈಲು ಪಾಲಾಗುವ ಸಾಧ್ಯತೆ ದಟ್ಟವಾಗಿದೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download

Facebook Comments

Sri Raghav

Admin