ದೇಶದಲ್ಲಿ 24 ಗಂಟೆಗಳಲ್ಲಿ 4120 ಮಂದಿ ಕೊರೋನಾಗೆ ಬಲಿ, 3,62ಲಕ್ಷ ಹೊಸ ಕೇಸ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ.13-ಕಳೆದ 24 ಗಂಟೆಗಳಲ್ಲಿ ಮತ್ತೆ 3,62 ಲಕ್ಷ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 2,37 ಕೋಟಿ ಗಡಿ ದಾಟಿದೆ.ದಿನೇ ದಿನೇ ಸಾವಿನ ಸಂಖ್ಯೆ ಏರುತ್ತಲೆ ಇದೆ. ನಿನ್ನೆ 4120 ಮಂದಿ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 2,58,317 ಲಕ್ಷವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಉಲ್ಲೇಖಿಸಿವೆ.

ಒಟ್ಟು ಸೋಂಕಿನ ಪ್ರಮಾಣ ಶೇ.15.65 ರಷ್ಟಿದ್ದು ಒಟ್ಟು ಸಕ್ರಿಯ ಸೋಂಕಿನ ಪ್ರಮಾಣ 37,10,525ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಕೊರೊನಾ ಚೇತರಿಕೆ ಪ್ರಮಾಣವೂ ಏರಿಕೆಯಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.83.26 ರಷ್ಟು ಹೆಚ್ಚಿದೆ ಎಂಬುದು ಅಂಕಿ ಅಂಶಗಳಲ್ಲಿ ಉಲ್ಲೇಖವಾಗಿದೆ. 2,37,03,665 ಮಂದಿ ಸೋಂಕಿತರ ಪೈಕಿ ಈಗಾಗಲೇ 1,97 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ.

Facebook Comments

Sri Raghav

Admin