ಲಾರಿಗೆ ಕಾರು ಡಿಕ್ಕಿ ಹೊಡೆದು ಬೆಂಗಳೂರು ಮೂಲದ ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01

ತುಮಕೂರು, ಜು.6- ಸ್ನೇಹಿತನ ಮದುವೆ ಮುಗಿಸಿ ಹಿಂದಿರುಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕೆಬಿ ಕ್ರಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಅರವಿಂದ್ (32), ವಿನಯ್‍ಕುಮಾರ್ (32), ತಿಪ್ಪೆಸ್ವಾಮಿ (40), ದಿವಾಕರ್ (53) ಮೃತಪಟ್ಟ ದುರ್ದೈವಿಗಳು.ಮೂಲತಃ ಬೆಂಗಳೂರಿನ ನಿವಾಸಿಗಳಾದ ಇವರು ಬಾಷ್ ಕಂಪೆನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮೆಕ್ಯಾನಿಕ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಸ್ನೇಹಿತ ತಿಪ್ಪೆಸ್ವಾಮಿ ಮದುವೆ ಶಿವಮೊಗ್ಗದಲ್ಲಿ ನಿನ್ನೆ ನಡೆದಿದ್ದು, ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನಂತರ ರಾತ್ರಿ 9 ಗಂಟೆಗೆ ಶಿವಮೊಗ್ಗವನ್ನು ಬಿಟ್ಟು ಬೆಂಗಳೂರಿಗೆ ಹಿಂದಿರುಗುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ-206 ರಸ್ತೆ ಇಂಡಸ್‍ಕೆರೆ ಬಳಿ ಕಾರು-ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಅರವಿಂದ್, ವಿನಯ್ ಸ್ಥಳದಲ್ಲೇ ಮೃತಪಟ್ಟಿದ್ದು, ತಿಪ್ಪೆಸ್ವಾಮಿಯನ್ನು ಆಸ್ಪತ್ರೆಗೆ ಸೇರಿಸಿದ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಿವಾಕರ್ ಬೆಂಗಳೂರಿನ ನಿಮ್ಹಾನ್ಸ್‍ನಲ್ಲಿ ಕೊನೆಯುಸಿರೆಳೆದಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ವೃತ್ತ ನಿರೀಕ್ಷಕ ಕೃಷ್ಣರಾಜ್, ಡಿವೈಎಸ್‍ಪಿ ವೇಣುಗೋಪಾಲ್, ಕೆಬಿ ಕ್ರಾಸ್ ಠಾಣೆ ಸಬ್‍ಇನ್ಸ್‍ಪೆಕ್ಟರ್ ರಾಮ್‍ಪ್ರಸಾದ್ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೆಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin