ರಾಜ್ಯದಲ್ಲಿಂದು ಕೊರೋನಾಸುರನ ಆರ್ಭಟ : 49058 ಹೊಸ ಕೇಸ್, 328 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಇಂದು ರಾಜ್ಯಾದ್ಯಂತ 49058 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 328 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1790104 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 17212ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಕೊರೋನಾ ಮಾಹಾಸ್ಪೋಟವಾಗಿದ್ದು 23706 ಜನರಿಗೆ ಕೊರೋನಾ ತಗುಲಿದ್ದು, 139 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 887086 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 7145 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 18943 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1255797 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲಾವಾರು ಸೋಂಕಿತ ಸಂಖ್ಯೆ ಕೆಳಕಂಡಂತಿದೆ :

Facebook Comments

Sri Raghav

Admin