BREAKING : ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಬಲಿ, 4ಕ್ಕೇರಿದ ಸಾವಿನ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.1- ಮಹಾಮಾರಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ನಾಲ್ಕು ಮಂದಿ ಸರ್ವಾಂತರ್ಯಾಮಿಯಾಗಿರುವ ರೋಗಕ್ಕೆ ತುತ್ತಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ವರ್ಷ ವೃದ್ಧರೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. 75 ವರ್ಷದ ಈ ವ್ಯಕ್ತಿ ಯಾವುದೇ ದೇಶಕ್ಕೆ ಭೇಟಿ ನೀಡಿದ ಹಿನ್ನೆಲೆ ಹೊಂದಿಲ್ಲ. ಆದರೂ ಕಳೆದ ತಿಂಗಳು ಅನಾರೋಗ್ಯಕ್ಕೆ ತುತ್ತಾಗಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಆ ವೇಳೆಗೆ ಅವರಲ್ಲಿ ಸೋಂಕಿರುವ ಲಕ್ಷಣಗಳು ಕಂಡು ಬಂದಿದ್ದವು. ಮಾರ್ಚ್ 31ರಂದು ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಪ್ರತ್ಯೇಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಅವರಿಗೆ ಕೊರೊನಾ ತಗುಲಿರುವುದು ಖಚಿತವಾಗಿತ್ತು. ಇಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅವರ ಕುಟುಂಬದ ಏಳು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಐದು ಮಂದಿಗೆ ಸೋಂಕಿಲ್ಲ ಎಂದು ಸ್ಪಷ್ಟವಾಗಿದೆ. ಉಳಿದ ಇಬ್ಬರ ವರದಿ ಬರಬೇಕಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ ನಾಲ್ಕು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮೊದಲನೆಯದಾಗಿ ಕಲ್ಬುರ್ಗಿಯಲ್ಲಿ ವೃದ್ಧ‍ರೊಬ್ಬರು ಬಲಿಯಾದರು. ನಂತರದಲ್ಲಿ ಗೌರಿಬಿದನೂರಿನ ಮಹಿಳೆ, ಶಿರಾದ ವೃದ್ಧರೊಬ್ಬರು ಸೇರಿ ಒಟ್ಟು ಮೂರು ಮಂದಿ ಸಾವನ್ನಪ್ಪಿದ್ದರು. ಈಗ ನಾಲ್ಕನೆಯ ವ್ಯಕ್ತಿ ಮೃತಪಟ್ಟಿದ್ದಾರೆ.

Facebook Comments

Sri Raghav

Admin