5 ಮಂದಿ ಮನೆಗಳ್ಳರ ಬಂಧನ : 10ಲಕ್ಷ ಬೆಲೆಯ ಚಿನ್ನಾಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

robbry--in--house

ಬೆಳಗಾವಿ, ಅ.21-ಸಿಸಿಬಿಪೊಲೀಸರು ಕಾರ್ಯಾಚರಣೆ ನಡೆಸಿ ಐದು ಮಂದಿ ಮನೆಗಳ್ಳರನ್ನು ಬಂಧಿಸಿ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಅಪರಾಧ ವಿಭಾಗದ ಡಿಸಿಪಿ ಅಮರ್‍ನಾಥ್ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್‍ಪೆಕ್ಟರ್ ಬಿ.ಆರ್.ಗಡ್ಡೇಕರ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಒಂದು ರಿವಾಲ್ವರ್ ಹಾಗೂ 20 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದೆ.ಬಂಧಿತರಿಂದ 307 ಗ್ರಾಂ ಚಿನ್ನ, 2.840 ಕೆಜಿ ಬೆಳ್ಳಿ ವಸ್ತುಗಳು, ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳ ಬಂಧನದಿಂದ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

 

► Follow us on –  Facebook / Twitter  / Google+

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin