5 ರಾಜ್ಯಗಳಲ್ಲಿ ಭೀಕರ ಪ್ರವಾಹದಿಂದ ನೆಲೆ ಕಳೆದುಕೊಂಡ 50 ಲಕ್ಷ ಜನ

ಈ ಸುದ್ದಿಯನ್ನು ಶೇರ್ ಮಾಡಿ

Flood-0111

ನವದೆಹಲಿ, ಆ.21- ಉತ್ತರ ಪ್ರದೇಶ, ಮಧ್ಯ ಪ್ರದೇಶ, ಅಸ್ಸೋಂ, ಬಿಹಾರ ಮತ್ತು ರಾಜಸ್ತ್ಞಾನದಲ್ಲಿ ಭಾರೀ ಮಳೆ ಮತ್ತು ಭೀಕರ ಪ್ರವಾಹದಿಂದಾಗಿ ಸಾವು-ನೋವುಗಳೊಂದಿಗೆ 50 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಈ ಐದು ರಾಜ್ಯಗಳಲ್ಲಿ ಸೇನಾಪಡೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುತ್ತಿದೆ.  ಜಲಪ್ರಳಯದಿಂದ ಉತ್ತರ ಪ್ರದೇಶದ 20 ಜಿಲ್ಲೆಗಳು, ಅಸ್ಸೋಂನ 18 ಮತ್ತು ಬಿಹಾರದ 8 ಜಿಲ್ಲೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಮಧ್ಯ ಪ್ರದೇಶ ಮತ್ತು ರಾಜಸ್ತಾನ ರಾಜ್ಯಗಳ ಕೆಲವೆಡೆ ನೆರೆ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.
ಈ ಪಂಚರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ದುರಂತಗಳಲ್ಲಿ ಈವರೆಗೆ 110ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿ, ಅನೇಕರು ಗಾಯಗೊಂಡಿದ್ದಾರೆ. ನೂರಾರು ಹಳ್ಳಿಗಳು ಜಲಾವೃತವಾಗಿದ್ದು, ಅಪಾರ ಆಸ್ತಿ ನಷ್ಟ ಉಂಟಾಗಿದೆ. 50 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದು, ಪ್ರವಾಹದ ನೀರಿನಲ್ಲೇ ಸುರಕ್ಷಿತ ಸ್ಥಳಗಳಿಗೆ ಗುಳೆ ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.
ಮಧ್ಯ ಪ್ರದೇಶದಲ್ಲಿ ಸಾವು-ನೋವು ಮತ್ತು ಅಪಾರ ಹಾನಿಗೆ ಕಾರಣವಾಗಿರುವ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹಾಣ್ ನೇತೃತ್ವದ ಸಭೆ ನಡೆಸಿ ಮುಂದಿನ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲಾಗಿದೆ.   ಮಧ್ಯಪ್ರದೇಶದ ವಿವಿಧೆಡೆ ಮಳೆ ಮತ್ತು ಪ್ರವಾಹದಿಂದ ಸತ್ತವರ ಸಂಖ್ಯೆ 17ಕ್ಕೇರಿದೆ.

► Follow us on –  Facebook / Twitter  / Google+

Facebook Comments

Sri Raghav

Admin