5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್..! : ಬೆಂಗಳೂರಿನಲ್ಲೇ ನಡೆದಿದೆ ಪೈಶಾಚಿಕ ಕೃತ್ಯ

ಈ ಸುದ್ದಿಯನ್ನು ಶೇರ್ ಮಾಡಿ

Gang-Rape

ಬೆಂಗಳೂರು, ಜೂ.3-ಐದು ವರ್ಷದ ಕಂದಮ್ಮನ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯವೊಂದು ಬೆಂಗಳೂರು ನಗರದಲ್ಲಿ ನಡೆದಿದ್ದು ನಾಗರಿಕ ಸಮಾಜ ಬೆಚ್ಚಿ ಬಿದ್ದಿದೆ.   ಕೆಜಿಹಳ್ಳಿ ವ್ಯಾಪ್ತಿಯ ವೈಯಾಲಿ ಕಾವಲ್ ಸೊಸೈಟಿ ಸಮೀಪ ಚಿತ್ರದುರ್ಗ ಮೂಲದ ಐದು ವರ್ಷದ ಬಾಲಕಿಯನ್ನು ಅಪಹರಿಸಿದ ಐದು ಮಂದಿ ಕಿರಾತಕರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ವೆಸಗಿ ಮಧ್ಯರಾತ್ರಿ ಮಗುವನ್ನು ಮನೆ ಬಳಿ ಬಿಸಾಡಿ ಪರಾರಿಯಾಗಿದ್ದಾರೆ. ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಬೆಳಗಿನ ಜಾವ ನೋಡಿ ಕಂಗಾಲಾದ ಪೋಷಕರು ತಕ್ಷಣ ಕೆಜಿಹಳ್ಳಿ ಪೆÇಲೀಸರಿಗೆ ತಿಳಿಸಿದ್ದಾರೆ.ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲಿಸಿ ಅಸ್ವಸ್ಥ ಬಾಲಕಿಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಬಾಲಕಿಯನ್ನು ಪರೀಕ್ಷಿಸಿದಾಗ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.   ಇದೀಗ ಬಾಲಕಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು , ತುರ್ತು ಚಿಕಿತ್ಸಾ ಘಟಕದಲ್ಲಿ(ಐಸಿಯು)ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಕೆಜಿಹಳ್ಳಿ ಠಾಣೆ ಪೊಲೀಸರು ಪೊಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಕಾಮುಕರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಕೈಬೆರಳು ತುಂಡಾಗಿದೆ:

ಮುಂಜಾನೆ 3 ಗಂಟೆ ಸುಮಾರಿಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವನ್ನು ಕರೆತಂದಾಗ ಅರೆಪ್ರಜ್ಞಾವಸ್ಥೆಯಲ್ಲಿತ್ತು. ಮಗುವಿನ ಕೈಬೆರಳುಗಳು ಕಟ್ಟಾಗಿದೆ. ಸದ್ಯ ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು , ಚಿಕಿತ್ಸೆ ಮುಂದುವರೆದಿದೆ ಎಂದು ಬೌರಿಂಗ್ ಆಸ್ಪತ್ರೆಯ ನಿರ್ದೇಶಕ ಹಾಗೂ ಡೀನ್ ಮಂಜುನಾಥ್ ತಿಳಿಸಿದ್ದಾರೆ.

ಡಿಸಿಪಿ ಭೇಟಿ:

ಪೂರ್ವ ವಿಭಾಗದ ಡಿಸಿಪಿ ಅಜಯ್ ಹಿಲ್ಲೋರಿ ಅವರು ಇಂದು ಬೆಳಗ್ಗೆ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಬಾಲಕಿಯ ಆರೋಗ್ಯದ ಬಗ್ಗೆ ವೈದ್ಯರಿಂದ ವರದಿ ಪಡೆದುಕೊಂಡಿದ್ದಾರೆ. ಅಲ್ಲದೆ ಬಾಲಕಿಯ ಪೋಷಕರಿಂದಲ್ಲೂ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

ತಲೆಗೆ ಗಂಭೀರ ಗಾಯ:

ರಾತ್ರಿ ಮನೆಯಲ್ಲಿ ತಾಯಿಯ ಜೊತೆ ಮಲಗಿದ್ದ ಈ ಮಗು ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿರುವುದು ತಾಯಿಗೆ ಗೊತ್ತಾಗಿಲ್ಲ. ಈ ಸಂದರ್ಭದಲ್ಲಿ ಇಂತಹ ದುರ್ಘಟನೆ ನಡೆದಿದ್ದು, ಮಗುವಿನ ತಲೆಗೆ ಗಂಭೀರ ಗಾಯವಾಗಿದೆ. ಮಗು ಮಾತನಾಡುವ ಸ್ಥಿತಿಗೆ ಬಂದ ನಂತರ ಘಟನೆಯ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗಲಿದೆ ಎಂದು ಅಜಯ್ ಹಿಲೋರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.ಇದು ಸಮಾಜ ಸಹಿಸಲಾಗದ ಕೃತ : ಜಾರ್ಜ್ 
ಇದು ಸಮಾಜ ಸಹಿಸಲಾಗದ ಕೃತ್ಯ. ಗಂಭೀರ ಅಪರಾಧ ಪ್ರಕರಣ, ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಐದು ವರ್ಷ ಮಗುವೊಂದರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬ ಹಿನ್ನೆಲೆಯಲ್ಲಿ ಸಂತ್ರಸ್ಥಗೊಂಡು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಮಗು ಹಾಗೂ ಪೋಷಕರ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಹೀನ ಕೃತ್ಯವಾಗಿದ್ದು, ಸಮಾಜ ಇಂಥವರ ವಿರುದ್ಧ ಒಟ್ಟಾಗಿ ಶಿಕ್ಷೆ ನೀಡಬೇಕು. ಯಾರೇ ತಪ್ಪು ಮಾಡಿದರೂ ಕಠಿಣ ಶಿಕ್ಷೆಯಾಗಬೇಕು ಎಂದರು.

ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಮಗು ತಲೆಗೆ ಏಟಾಗಿದೆ. ಅದಕ್ಕೆ ಮೊದಲು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸಿ ಕೋರ್ಟ್‍ಗೆ ವರದಿ ನೀಡುತ್ತಾರೆ ಎಂದು ಹೇಳಿದರು.  ತನಿಖೆ ವಿಷಯವಾಗಿ ನಾವೆಲ್ಲ ಪೊಲೀಸರಿಗೆ ಸಹಕರಿಸಬೇಕು. ಇಂತಹ ಕೃತ್ಯ ಎಸಗಿದವರಿಗೆ ಶಿಕ್ಷೆ ಕೊಡಿಸಬೇಕು ಎಂದು ಜಾರ್ಜ್ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin