ಆ್ಯಸಿಡ್ ದಾಳಿ ಆರೋಪಿ ಬಂಧಿಸಿದ ಪೊಲೀಸರಿಗೆ 5 ಲಕ್ಷ ಬಹುಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 14- ಯುವತಿ ಮೇಲೆ ಆ್ಯಸಿಡ್ ಸುರಿದು ಪರಾರಿಯಾಗಿದ್ದ ನಾಗೇಶ್‍ನನ್ನು ಬಂಧಿಸಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡಗಳಿಗೆ ಒಟ್ಟು 5 ಲಕ್ಷ ರೂ. ಬಹುಮಾನವನ್ನು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರು ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಂದಿನ ಘಟನೆ ಮತ್ತು ಆರೋಪಿ ಬಂಧನದ ಬಗ್ಗೆ ಸವಿವರವಾಗಿ ವಿವರಿಸಿದ ಅವರು, ಆತನ ಬಂಧನ ಕಾರ್ಯದ ಬಗ್ಗೆ ಪ್ರಶಂಸಿಸಿ ತನಿಖಾ ತಂಡಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಸನಾ ಪತ್ರ ನೀಡಿ ನಗದು ಬಹುಮಾನ ಘೋಷಿಸಿದ್ದಾರೆ.

2 ಲಕ್ಷ ನಗದು ಹಾಗೂ 3 ಲಕ್ಷ ರಿವಾರ್ಡ್ ಸೇರಿದಂತೆ ಒಟ್ಟು 5 ಲಕ್ಷ ರೂ. ಬಹುಮಾನ ಘೋಷಿಸಿರುವ ಅವರು ಅಧಿಕಾರಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಉತ್ತಮ ಕಾರ್ಯ ಮಾಡಿದೆ ಎಂದು ಆಯುಕ್ತರು ಶ್ಲಾಘಿಸಿದರು.

ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ನೇತೃತ್ವದಲ್ಲಿ ತನಿಖಾ ತಂಡಗಳು ಹಗಲಿರುಳು ಶ್ರಮಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ ಎಂದು ಅವರು ವಿವರಿಸಿದರು.

Facebook Comments