ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್..! ಇಲ್ಲಿದೆ ಡೀಟೇಲ್ಸ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ ಫೆ.26- ಮಿನಿಮಹಾಸಮರ ಎಂದೇ ಹೇಳಲಾಗಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನಸಭೆಗೆ‌ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 2 ರಂದು ಏಕಕಾಲಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋಹರ ಅವರು, ಚುನಾವಣೆಯ ವೇಳಾ ಪಟ್ಟಿ ಬಿಡುಗಡೆ ಮಾಡಿದ್ದು, ತಕ್ಷಣದಿಂದಲೇ ಚುನಾವಣೆ ನಡೆಯುವ ರಾಜ್ಯ ಹಾಗೂ ಪ್ರದೇಶಗಳಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದರು.

ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಎಲ್ಲಾ ರಾಜ್ಯಗಳಿಗೆ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ವಿಧಾನಸಭೆಗಳ ಅಧಿಕಾರವಧಿ ಮೇ ತಿಂಗಳ ಅಂತ್ಯಕ್ಕೆ ಮುಗಿಯಲಿದೆ. ಐದು ರಾಜ್ಯಗಳಲ್ಲಿ ಒಟ್ಟು 18.68 ಕೋಟಿ ಮತದಾರರು 824 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮತದಾನ ಮಾಡಲಿದ್ದಾರೆ. 2.7 ಲಕ್ಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ ಎಂದರು.

ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 30 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 2ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 9ರಂದು ಕೊನೆ ದಿನ, 10ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 12 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.ಮಾರ್ಚ್ 27 ಮತದಾನ ನಡೆಯಲಿದೆ.

ಎರಡನೇ ಹಂತದಲ್ಲಿ 30 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 5ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 13ರಂದು ಕೊನೆ ದಿನ, 15ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 17 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 1 ರಂದು ಮತದಾನ ನಡೆಯಲಿದೆ.

ಮೂರನೇ ಹಂತದಲ್ಲಿ 31 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 12ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 19ರಂದು ಕೊನೆ ದಿನ, 20ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 6 ರಂದು ಮತದಾನ ನಡೆಯಲಿದೆ.

ನಾಲ್ಕನೇ ಹಂತದಲ್ಲಿ 44 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 16ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 23ರಂದು ಕೊನೆ ದಿನ, 24ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 12 ರಂದು ಮತದಾನ ನಡೆಯಲಿದೆ.

ಐದನೇ ಹಂತದಲ್ಲಿ ನಡೆಯುವ ಚುನಾವಣೆಗೆ ಮಾರ್ಚ್ 23ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 30ರಂದು ಕೊನೆ ದಿನ, 31ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಏಪ್ರಿಲ್ 3 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 17 ರಂದು ಮತದಾನ ನಡೆಯಲಿದೆ.

ಆರನೇ ಹಂತದಲ್ಲಿ 43 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 26ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು ಏಪ್ರಿಲ್ 3ರಂದು ಕೊನೆ ದಿನ, ಏಪ್ರಿಲ್ 5 ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಏಪ್ರಿಲ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 22 ರಂದು ಮತದಾನ ನಡೆಯಲಿದೆ.

ಏಳನೇ ಹಂತದಲ್ಲಿ 36 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 31ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು ಏಪ್ರಿಲ್ 7ರಂದು ಕೊನೆ ದಿನ, ಏಪ್ರಿಲ್ 8 ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಏಪ್ರಿಲ್ 10 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಎಂಟನೇ ಹಂತದಲ್ಲಿ 35 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 31ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು ಏಪ್ರಿಲ್ 7ರಂದು ಕೊನೆ ದಿನ, ಏಪ್ರಿಲ್ 8 ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಏಪ್ರಿಲ್ 10 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 29 ರಂದು ಮತದಾನ ನಡೆಯಲಿದೆ.

ತಮಿಳುನಾಡಿನ 234 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ, ಪುದುಚೇರಿ 30 ಸ್ಥಾನಗಳಿಗೆ. ನಡೆಯುವ ಚುನಾವಣೆಗೆ ಮಾರ್ಚ್ 12ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 19ರಂದು ಕೊನೆ ದಿನ,20ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 6 ರಂದು ಮತದಾನ ನಡೆಯಲಿದೆ.
ಅಸ್ಸಾಂನ 126 ಸ್ಥಾನಗಳಿಗೆ 3 ಹಂತದಲ್ಲಿ ಚುನಾವಣಾ ನಡೆಯುತ್ತಿದ್ದು, ಮೊದಲ ಹಂತಕ್ಕೆ ಮಾರ್ಚ್ 2ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 9ರಂದು ಕೊನೆ ದಿನ, 10ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 12 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮಾರ್ಚ್ 27 ಮತದಾನ ನಡೆಯಲಿದೆ.

ಎರಡನೇ ಹಂತಕ್ಕೆ ನಡೆಯುವ ಚುನಾವಣೆಗೆ ಮಾರ್ಚ್ 5ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು 12ರಂದು ಕೊನೆ ದಿನ, 15ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 17 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 1 ಮತದಾನ ನಡೆಯಲಿದೆ.

3 ನೇ ಹಂತಕ್ಕೆ ನಡೆಯುವ ಚುನಾವಣೆಗೆ ಮಾರ್ಚ್ 12ರಂದು ಅಧಿಸೂಚನೆ ಜಾರಿಯಾಗಲಿದೆ, ನಾಮಪತ್ರ ಸಲ್ಲಿಸಲು19ರಂದು ಕೊನೆ ದಿನ, 28ರಂದು ನಾಮಪತ್ರ ಪರಿಶೀಲನೆಯಾಗಲಿದೆ, ಮಾರ್ಚ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏಪ್ರಿಲ್ 06ಮತದಾನ ನಡೆಯಲಿದೆ.
ಕೊರೊನಾದ ದುರಿತ ಸಂದರ್ಭದಲ್ಲಿ ನಡೆಯಲಿರುವ ಈ ಚುನಾವಣೆಗಳು ದೇಶದ ರಾಜಕೀಯದಲ್ಲಿ ಮಹತ್ವದ್ದೆಂದು ಹೇಳಲಾಗಿದೆ.

ಮಿನಿ ಮಹಾಸಮರಕ್ಕೆ ರಾಜಕೀಯ ಪಕ್ಷಗಳು ಈಗಾಗಲೇ ತಯಾರಿ ನಡೆಸಿವೆ. ಪ್ರಮುಖ ರಾಜಕೀಯ ಪಕ್ಷಗಳು ಆಯಾ ರಾಜ್ಯಗಳಿಗೆ ತೆರಳಿ ಪ್ರಚಾರ ಆರಂಭಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ನಾನಾ ರೀತಿಯ ಕಸರತ್ತುಗಳು ಸುರುವಾಗಿವೆ. ಈಗ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವುದರಿಂದ ಮಿನಿ ಮಹಾಸಮರಕ್ಕೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ.

ಪಶ್ಚಿಮ ಬಂಗಾಳದಲ್ಲಿ ಕೆಲಸ ಮಾಡುವ ಕೇಂದ್ರ ಪಡೆಯ ಸಿಬ್ಬಂದಿಗಳಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಘೋಷಿಸಲಾಗಿದೆ. ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುವುದು. ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ಹಾಕಲಾಗುವುದು. ಜನರಲ್ಲಿ ಸುರಕ್ಷತೆಯ ಭಾವನೆ ಮೂಡಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮನೆ ಮನೆ ಪ್ರಚಾರಕ್ಕೆ ಐದು ಮಂದಿ ಮಾತ್ರ ಹೋಗಬೇಕು. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಿಗೆ ಸಿಆರ್‍ಪಿಎಫ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದು ಸುನೀಲ್ ಅರೋರಾ ಹೇಳಿದರು.

ಈಗಾಗಲೇ ಎಲ್ಲಾ ರಾಜ್ಯಗಳಿಗೂ ಕೇಂದ್ರ ಚುನಾವಣಾ ವೀಕ್ಷಕರನ್ನು ಮತ್ತು ಭದ್ರತೆಯ ಉಸ್ತುವಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು. ಕೊರೊನಾ ಸಂದರ್ಭದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿ ಮುಂಜೂಣಿಯಲ್ಲಿ ಕೆಲಸ ಮಾಡುವವರನ್ನು ಅಭಿನಂದಿಸಿದರು. ಚುನಾವಣೆ ಕಾಲದಲ್ಲಿ ಸೋಂಕು ಹೆಚ್ಚಾಗದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಾಂತಿಯುತ, ನಿಷ್ಪಕ್ಷಪಾತ ಚುನಾವಣೆ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈಗಾಗಲೇ ಎಲ್ಲಾ ರಾಜ್ಯಗಳಿಗೂ ಕೇಂದ್ರ ಚುನಾವಣಾ ವೀಕ್ಷಕರನ್ನು ಮತ್ತು ಭದ್ರತೆಯ ಉಸ್ತುವಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

Facebook Comments

Sri Raghav

Admin