ಕಾಶ್ಮೀರದಲ್ಲಿ 2 ಕಡೆ ಎನ್‍ಕೌಂಟರ್, ಐವರು ಉಗ್ರರು ಖತಂ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಜೂ.13- ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರ ಹುಟ್ಟಡಗಿಸುವ ಕಾರ್ಯಾಚರಣೆಯನ್ನು ಭಾರತೀಯ ಯೋಧರು ಮತ್ತಷ್ಟು ಬಿರುಸುಗೊಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಉಗ್ರಗಾಮಿಗಳ ಉಪಟಳ ತೀವ್ರಗೊಂಡಿದ್ದು, ಇಂದು ಮುಂಜಾನೆ ಎರಡು ಕಡೆ ಯೋಧರೊಂದಿಗೆ ನಡೆದ ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಐವರು ಉಗ್ರಗಾಮಿಗಳು ಹತರಾಗಿದ್ದಾರೆ.

ಮೃತ ಆತಂಕವಾದಿಗಳಿಂದ ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯೊಂದಿಗೆ ಐದು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಒಟ್ಟು 18 ಉಗ್ರಗಾಮಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ನಡೆದ ಎರಡು ಎನ್‍ಕೌಂಟ್‍ಗಳಲ್ಲಿ ಒಟ್ಟು ಐವರು ಉಗ್ರರು ಹತರಾಗಿದ್ಧಾರೆ ಎಂದು ಹಿರಿಯ ಪಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಲ್ಗಾಂ ಜಿಲ್ಲೆಯ ನಿಪೊರಾ ಪ್ರದೇಶದಲ್ಲಿ ಇಂದು ನಸುಕಿನಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಲಾಗಿದೆ. ಅನಂತನಾಗ್ ಜಿಲ್ಲೆಯ ಲಲ್ಲಾನ್ ಎಂಬಲ್ಲಿ ಇಂದು ಮುಂಜಾನೆ ನಡೆದ ಎನ್‍ಕೌಂಟರ್‍ನಲಲಿ ಮೂವರು ಆತಂಕವಾದಿಗಳನ್ನು ಹತ್ಯೆ ಮಾಡಲಾಗಿದೆ.

ಈ ಎರಡೂ ಪ್ರಕರಣಗಳಲ್ಲೂ ಎಕೆ-47, ಎಕೆ-56 ರೈಫಲ್‍ಗಳು, ಪಿಸ್ತೂಲ್‍ಗಳು, ಹ್ಯಾಂಡ್ ಗ್ರೆನೇಡ್‍ಗಳು, ಬುಲೆಟ್‍ಗಳು ಇರುವ ಮ್ಯಾಗಝೈನ್‍ಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಗುಂಡಿನ ಕಾಳಗಗಳ ವೇಳೆ ಕೆಲವು ಭಯೋತ್ಪಾದಕರಿಗೆ ಗಾಯಗಳಾಗಿದ್ದು, ಕತ್ತತಲ್ಲಿ ಪರಾರಿಯಾಗಿರುವ ಸಾಧ್ಯತೆ ಇದೆ. ಇವರಿಗಾಗಿ ಶೋಧ ಮುಂದುವರಿದಿದೆ.

ಜಮ್ಮು ಮತ್ತು ಕಾಶ್ಮೀರ ಜಂಟಿ ಪೊಲೀಸ್ ಪಡೆ, ರಾಷ್ಟ್ರೀಯ ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಈ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು.

ನಿನ್ನೆಯಷ್ಟೇ ಪಾಕಿಸ್ತಾನದ ಮಾದಕ ವಸ್ತು ಕಳ್ಳಸಾಗಣೆ ಭಯೋತ್ಪಾದನೆ ಜಾಲವನ್ನು ಭೇದಿಸಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸರು. ಕುಖ್ಯಾತ ಡ್ರಗ್ಸ್ ಸ್ಮಗ್ಲರ್ ಸೇರಿದಂತೆ ಮೂವರು ಲಷ್ಕರ್-ಎ-ತೈಬಾ (ಎಲ್‍ಇಟಿ) ಉಗ್ರಗಾಮಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 100 ಕೋಟಿ ರೂ. ಮೌಲ್ಯ ಹೆರಾಯಿನ್ ಮಾದಕ ವಸ್ತು ಮತ್ತು 1.34 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.

Facebook Comments