ವಿಚಿತ್ರ ಕಾಯಿಲೆಗೆ 50 ಕುರಿಗಳು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ನ.18- ವಿಚಿತ್ರ ಕಾಯಿಲೆಗೆ ಒಂದೇ ಗ್ರಾಮದಲ್ಲಿ 50 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಐನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದ್ದಕ್ಕಿದ್ದಂತೆ ಕುರಿಗಳಿಗೆ ವಿಚಿತ್ರ ಕಾಯಿಲೆ ಆವರಿಸಿದ್ದ ನಾಲಿಗೆ ದಪ್ಪವಾಗಿ ಕಂದು ಬಣ್ಣಕ್ಕೆ ತಿರುಗಿ ಸಾವನ್ನಪ್ಪುತ್ತಿವೆ. ಇದರಿಂದ ಕುರಿ ಸಾಕಾಣಿಕೆದಾರರು ಆತಂಕಕ್ಕೀಡಾಗಿದ್ದಾರೆ.

ಅದರಲ್ಲೂ ಒಂದೇ ದಿನ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವುದರಿಂದ ಕುರಿಗಳನ್ನು ನಂಬಿ ಜೀವನ ಸಾಗಿಸುತ್ತಿದ್ದ ರೈತರ ಜೀವನ ಸಂಕಷ್ಟಕ್ಕೀಡಾಗಿದೆ. ಕೂಡಲೇ ಪಶು ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ ವಿಚಿತ್ರ ಕಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Facebook Comments