500-100 ನೋಟುಗಳ ರದ್ದು ನಿರ್ಧಾರವನ್ನು ಸ್ವಾಗತಿಸಿದ ಐಎಂಎಫ್

ಈ ಸುದ್ದಿಯನ್ನು ಶೇರ್ ಮಾಡಿ

OMF

ವಾಷಿಂಗ್ಟನ್, ನ.11-ಕಾಳಧನ, ನಕಲಿ ನೋಟು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅಧಿಕ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅನೂರ್ಜಿತಗೊಳಿಸುವ ಭಾರತದ ಕ್ರಮವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಇಂಟರ್‍ನ್ಯಾಷನಲ್ ಮಾನಿಟರಿ ಫಂಡ್-ಐಎಂಎಫ್) ಸ್ವಾಗತಿಸಿದೆ. ಇದೇ ವೇಳೆ, ಈ ಪ್ರಕ್ರಿಯೆಯನ್ನು ಹೆಚ್ಚು ವಿವೇಚನಾಯುತವಾಗಿ ನಿರ್ವಹಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡಿದೆ.  ಭಾರತದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಅಕ್ರಮ ಹಣ ವಹಿವಾಟುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತ ಕೈಗೊಂಡಿರುವ ಕ್ರಮವನ್ನು ನಾವು ಬೆಂಬಲಿಸುತ್ತೇವೆ. ಆದರೆ ಇದರಿಂದ ಉಂಟಾಗುವ ಅಡಚಣೆ ಮತ್ತು ಗೊಂದಲ ನಿವಾರಣೆಗೆ ವಿವೇಚನೆಯಕ್ತ ಕ್ರಮಗಳನ್ನೂ ಕೈಗೊಳ್ಳಬೇಕೆಂದೂ ನಾವು ಸಲಹೆ ಮಾಡುತ್ತೇವೆ ಎಂದು ಐಎಂಎಫ್ ವಕ್ತಾರ ಗೆರ್ರಿ ರೈಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಭಾರತ ಸರ್ಕಾರ ಕೈಗೊಂಡಿರುವ ಈ ಕ್ರಮದಿಂದ ಆ ದೇಶದ ಆರ್ಥಿಕ ಸ್ಥಿತಿ ಸದೃಢವಾಗಿ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin