500, 1000ರೂ. ನೋಟುಗಳ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

Notes-500-and-1000

ಬೆಂಗಳೂರು, ನ.11 – ಕಪ್ಪು ಹಣ ಮತ್ತು ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 500, 1000ರೂ. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವ ಕ್ರಮ ಶ್ಲಾಘನೀಯ. ಇದು ಮಾಸ್ಟರ್ ಸ್ಟ್ರೋಕ್ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿಯವರು ನೋಟು ನಿಷೇಧ ಮಾಡಿರುವ ಕ್ರಮ ವಿರೋಧಿಸಿ ವಿಭಾಗೀಯ ಪೀಠದಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯನ್ನು ವಜಾಗೊಳಿಸಿದ್ದಾರೆ.  ಮಹಮ್ಮದ್ ರಶೀದ್ ಎಂಬುವವರು ನೋಟು ನಿಷೇಧ ಮಾಡಿರುವ ಕ್ರಮ ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಿಚಾರಣೆ ಸಂದರ್ಭದಲ್ಲಿ ನಕಲಿ ನೋಟು ಮತ್ತು ಭ್ರಷ್ಟಾಚಾರ ತಡೆಗೆ ನೋಟುಗಳನ್ನು ಬ್ಯಾನ್ ಮಾಡಿರುವ ಕ್ರಮ ಶ್ಲಾಘನೀಯವಾಗಿದೆ ಎಂದು ಕೇಂದ್ರ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ದಿಢೀರ್ ನೋಟ್ ಮ್ಯಾನ್ ಮಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಕ್ರಮವನ್ನು ತಡೆಹಿಡಿಯಬೇಕೆಂದು ಮಹಮ್ಮದ್ ರಶೀದ್ ಅವರು ತಮ್ಮ ವಾದ ಮಂಡಿಸಿದರು.
ಇದಕ್ಕೆ ಹೈಕೋರ್ಟ್‍ನ ಎಎಸ್‍ಜಿ ಪ್ರಭುಲಿಂಗ ನಾವೋಡ ಆಕ್ಷೇಪ ವ್ಯಕ್ತಪಡಿಸಿ ಕಪ್ಪುಹಣ ಮತ್ತು ನಕಲಿ ನೋಟುಗಳ ತಡೆಗೆ ಕೇಂದ್ರ ದಿಟ್ಟ ಕ್ರಮ ಕೈಗೊಂಡಿದೆ. ಹಾಗಾಗಿ ಸಾರ್ವಜನಿಕ ಹಿತಾಸಕ್ತ ಅರ್ಜಿಯನ್ನು ವಜಾ ಮಾಡಬೇಕೆಂದು ಮಾಡಿದ ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿಯವರು ಇದು ನಿಜಕ್ಕೂ ಮಾಸ್ಟರ್ ಸ್ಟ್ರೋಕ್ ಎಂದು ಹೇಳಿ ದೂರುದಾರರ ಅರ್ಜಿಯನ್ನು ವಜಾಗೊಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin