500-1000 ರೂ. ನೋಟುಗಳ ನಿಷೇಧ ಪ್ರಶ್ನಿಸಿ ಸುಪ್ರೀಂನಲ್ಲಿ ಸಲ್ಲಿಕೆಯಾಯ್ತು ಪಿಐಎಲ್

ಈ ಸುದ್ದಿಯನ್ನು ಶೇರ್ ಮಾಡಿ

Supreme-Court

ನವದೆಹಲಿ, ನ.10- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 500 ಹಾಗೂ 1ಸಾವಿರ ರೂ.ಗಳ ನೋಟುಗಳ ಚಲಾವಣೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ವಕೀಲ ವಿವೇಕ್ ನಾರಾಯಣ್ ಶರ್ಮ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್)ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ. ಅರ್ಜಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸು ಸಚಿವಾಲಯ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಭಾರತ ಸಂವಿಧಾನದಲ್ಲಿ ಪ್ರಜೆಗಳಿಗೆ ಬದುಕಲು ಮತ್ತು ವ್ಯಾಪಾರ ಮಾಡಲು ಹಕ್ಕು ನೀಡಿದೆ. ಆದರೆ, ಮೋದಿ ಸರ್ಕಾರ ನೋಟುಗಳನ್ನು ರದ್ದು ಮಾಡಿ ಜನರ ಮೇಲೆ ಗದಾಪ್ರಹಾರ ನಡೆಸಿದೆ ಎಂದರು.

ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಅಸಂಬಂದ್ಧ ನಿರ್ಧಾರದಿಂದ ಜನರು ಕಷ್ಟಪಡುತ್ತಿದ್ದಾರೆ. ಹೀಗಾಗಿ ಅಂತಹ ನಿರ್ಧಾರವನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ತಿಳಿಸಿದ್ದಾರೆ ಎಂದು ಹೇಳಿದರು.  ಕಪ್ಪು ಹಣ ಭ್ರಷ್ಟಾಚಾರ, ಕಾಳಧನಿಕರ ಹಣವನ್ನು ತಡೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮಂಗಳವಾರ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವಾಗ 500 ಹಾಗೂ 1ಸಾವಿರ ರೂ. ನೋಟುಗಳ ಚಲಾವಣೆಗೆ ನಿಷೇಧ ಏರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin