ದೆಹಲಿ ಆಸ್ಪತೆಗಳಲ್ಲಿ ಬೆಡ್‍ಗಳ ಕೊರತೆ, ರೈಲ್ವೆ ಬೋಗಿಗಳ ಪರ್ಯಾಯ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.14- ಕೊರೊನಾ ಸೋಂಕು ರೋಗಿಗಳ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ರಾಜಧಾನಿ ದೆಹಲಿಯ ಆಸ್ಪತ್ರೆಗಳಲ್ಲಿ ಬೆಡ್‍ಗಳ ಕೊರತೆ ನೀಗಿಸಲು ಕೇಂದ್ರ ಸರ್ಕಾರ 500 ರೈಲ್ವೆ ಬೋಗಿಗಳ ಪರ್ಯಾಯ ವ್ಯವಸ್ಥೆ ಕಲ್ಪಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ದೆಹಲಿಯಲ್ಲಿ ಯಾವುದೇ ಕಾರಣಕ್ಕೂ ರೋಗಿಗಳ ಚಿಕಿತ್ಸೆಗೆ ಅನಾನುಕೂಲವಾಗದಂತೆ ಮತ್ತು ಸೋಂಕಿತರ ಚೇತರಿಕೆಗಾಗಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ರಾಜಧಾನಿ ನವದೆಹಲಿಯಲ್ಲಿ ಕಿಲ್ಲರ್ ಕೊರೊನಾ ವೈರಸ್ ದಾಳಿ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿ ಲೆಪ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಬ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.

ದೆಹಲಿಯಲ್ಲಿ ಕೋವಿಡ್-19 ವೈರಸ್‍ನಿಂದಾಗಿ 1,200ಕ್ಕೂ ಹೆಚ್ಚು ಮಂದಿ ಮೃತಪಟ್ಟು, 39,000 ಮಂದಿ ರೋಗ ಪೀಡಿತರಾಗಿದ್ದಾರೆ. ಈ ಆತಂಕಕಾರಿ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಕೇಂದ್ರ ಸಚಿವರು ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್ನರ್ ಮತ್ತು ಮುಖ್ಯಮಂತ್ರಿ ಅವರೊಂದಿಗೆ ಪರಿಸ್ಥಿತಿ ಬಗ್ಗೆ ಗಂಭೀರ ಪರಾಮರ್ಶೆ ನಡೆಸಿದರು.

ಕಿಲ್ಲರ್ ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಮಾರ್ಗೋಪಾಯಗಳು, ಲಭ್ಯವಿರುವ ಆಸ್ಪತ್ರೆಗಳು, ಆಸ್ಪತ್ರೆಗಳಲ್ಲಿನ ಹಾಸಿಗೆಗಳ ಸಾಮಥ್ರ್ಯ, ಪ್ರಯೋಗ ಮತ್ತು ಪರೀಕ್ಷೆ ಸೌಲಭ್ಯಗಳು, ಮೂಲಸೌಕರ್ಯಗಳ ಸುಧಾರಣೆ ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮಾನಿಷ್ ಸಿಸೋಡಿಯಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಹಾಗೂ ಉನ್ನತಾಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅಮಿತ್ ಶಾ ಅವರು ಇಂದು ಸಂಜೆ ದೆಹಲಿಯ ಉತ್ತರ, ದಕ್ಷಿಣ ಮತ್ತು ಪೂರ್ವ ಮುನ್ಸಿಪಲ್ ಕಾರ್ಪೊರೇಷನ್ ಗಳ ಮೂವರು ಮೇಯರ್ ಮತ್ತು ಹಿರಿಯ ಅಕಾರಿಗಳ ಸಭೆಯೊಂದನ್ನು ಕರೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

Facebook Comments

Sri Raghav

Admin