ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಕೊರೋನಾ ಆಸ್ಫೋಟ, ಇಂದು 5007 ಮಂದಿಗೆ ಪಾಸಿಟಿವ್, 110 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಆಸ್ಫೋಟಗೊಂಡಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 5007 ಮಂದಿಗೆ ಪಾಸಿಟಿವ್ ಬಂದಿದ್ದು, 110 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 85870ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1724 ಏರಿಕೆಯಾಗಿದೆ.

ಇತ್ತ ರಾಜಧಾನಿ ಬೆಂಗಳೂರಲ್ಲೂ ಸಹ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು 2267 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಜೊತೆಗೆ 50 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾನಗರಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41467 ಕ್ಕೆ ಏರಿಕೆಯಾದರೆ. ಒಟ್ಟು ಸಾವಿನ ಸಂಖ್ಯೆ 833 ಕ್ಕೇರಿದೆ.

ರಾಜ್ಯದಲ್ಲಿ 52791 ಸಕ್ರಿಯ ಪ್ರಕರಣಗಳಿದ್ದು, 611 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 29819 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯ್ದಲ್ಲಿ ಈವರೆಗೆ ಒಟ್ಟು 1110497 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

Facebook Comments

Sri Raghav

Admin