53 ಕೋಟಿ ರೂ. ವೆಚ್ಚದಲ್ಲಿ ಮನೆಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

Benbgaluru--01

ಬೆಂಗಳೂರು, ಸೆ.20-ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸ್ವತಂತ್ರಪಾಳ್ಯದ ಕೊಳಚೆ ಪ್ರದೇಶದಲ್ಲಿ 933 ಮನೆಗಳ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಗುದ್ದಲಿ ಪೂಜೆ ನೆರವೇರಿಸಿದರು. ತೀವ್ರವಾಗಿ ಶಿಥಿಲಗೊಂಡಿರುವ ಮನೆಗಳು ಹಾಗೂ ನಿವರ್ಸತಿಗರಿಗೆ ಮನೆ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಒಟ್ಟು 53 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಎಲ್ಲರಿಗೂ ಸೂರು, ಹಸಿವು ಮುಕ್ತ ರಾಜ್ಯ ಮಾಡುವ ಸಂಕಲ್ಪದೊಂದಿಗೆ ಸರ್ಕಾರ ದಿಟ್ಟ ಹೆಜ್ಜೆ ಇಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಸತಿ ಸಚಿವ ಎಂ.ಕೃಷ್ಣಪ್ಪ, ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ವಿ.ದೇವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments

Sri Raghav

Admin