ಗುತ್ತಿಗೆದಾರನ ಅಪಹರಿಸಿ ದರೋಡೆ ಮಾಡಿದ್ದ 6 ಮಂದಿ ಅರೆಸ್ಟ್ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.26- ಗುತ್ತಿಗೆದಾರರೊಬ್ಬರನ್ನು ಅಪಹರಿಸಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಆರು ಮಂದಿಯನ್ನು ಬಂಧಿಸಿ ನಗದು ಸೇರಿದಂತೆ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ನಟರಾಜ (37) , ತುಮಕೂರಿನ ಕಾರ್ತಿಕ್ (27) , ಕನಕಪುರ ತಾಲ್ಲೂಕಿನ ಬೈರಾ (28) , ಬೆಂಗಳೂರಿನ ನವೀನ್ (28) , ಮಂಜ (28) ಮತ್ತು ಗಣೇಶ (27) ಬಂಧಿತರು.

ಕೆಪಿ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಏ.30ರಿಂದ ಜೂ.5ರ ನಡುವೆ ಆರೋಪಿಗಳೆಲ್ಲಾ ಸೇರಿ ಐಷಾರಾಮಿ ಜೀವನ ನಡೆಸುವ ಸಲುವಾಗಿ ಸುಲಭವಾಗಿ ಹಣ ಮಾಡುವ ಉದ್ದೇಶದಿಂದ ಗುತ್ತಿಗೆದಾರ ಶಾಂತರಾಜು ಅವರನ್ನು ಕಾರಿನಲ್ಲಿ ಅಪಹರಣ ಮಾಡಿ ಚಾಕುವಿನಿಂದ ಚುಚ್ಚಿ ಚಿನ್ನದ ಸರ, ಮೊಬೈಲ್, ಹಣ ಕಿತ್ತುಕೊಂಡು ನೆಲಮಂಗಲ ಕಡೆ ಕರೆದುಕೊಂಡು ಹೋಗಿ 5 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು ಶಾಂತರಾಜು ಸ್ನೇಹಿತರ ಕಡೆಯಿಂದ 2.50 ಲಕ್ಷ ಹಣ ಪಡೆದು ಹೌಸಿಂಗ್ ಬೋರ್ಡ್ ಬಳಿ ಬಿಟ್ಟು ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಶಾಂತರಾಜು ಅವರು ಕೆಪಿ ಅಗ್ರಹಾರ ಠಾಣೆ ಪೊಲೀಸರಿಗೆ ನೀಡಿದ ದೂರಿನನ್ವಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ ಪೊಲೀಸ್ ಆಯುಕ್ತರು ಆರೋಪಿಗಳ ಪತ್ತೆಗಾಗಿ ತಂಡವನ್ನು ರಚಿಸಿದ್ದರು.

ಈ ತಂಡ ಕಾರ್ಯಾಚರಣೆ ನಡೆಸಿ ಆರು ಮಂದಿಯನ್ನು ಬಂಧಿಸಿ 92 ಸಾವಿರ ಹಣ, ಸರ, ಮೊಬೈಲ್, ಕಾರು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಸುರೇಶ್‍ನಿಗಾಗಿ ಪತ್ತೆ ಕಾರ್ಯ ಮುಂದುವರೆದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin