ಮಾದಕ ವಸ್ತು ಮಾರಾಟ ಮಾಡುತ್ತಿದ್ದಕೇರಳದ 6 ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.12- ಹಲವು ಬಗೆಯ ಮಾದಕ ವಸ್ತುಗಳನ್ನು ಮನೆಯಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಅರು ಮಂದಿ ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ತಸ್ಲೀಮ್(28), ಮಹಮದ್ ಅಮೀರ್(23), ಮನು ಥಾಮಸ್(25), ಹಸೀಬ್(25), ರಾಜಿಕ್(25) ಮತ್ತು ಜೋಮನ್(24) ಬಂಧಿತರು. ಆರೋಪಿಗಳಿಂz 8 ಲಕ್ಷ ರೂ.ಮೌಲ್ಯದ 2 ಕೆಜಿ ಗಾಂಜಾ, 20 ಗ್ರಾಂ ಎಂಡಿಎಂಎ, 50 ಎಕ್ಟೆಸಿ ಮಾತ್ರೆಗಳು, 20 ಎಲ್‍ಎಸ್‍ಡಿ ಸ್ಟಿಪ್ಸ್, 5 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ನಗರದ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಕಪಿಲಾ ಕ್ರಾಸ್ ರಸ್ತೆ, ಮಾರುತಿ ಡೆಂಟಲ್ ಕಾಲೇಜು ಹಿಂಭಾಗ, ಬಿಡಬ್ಲ್ಯೂಎಸ್‍ಎಸ್‍ಬಿ ಎದುರು, ವಿನಾಯಕ ಲೇಔಟ್‍ನಲ್ಲಿ ಕೇರಳದ ಆರು ಮಂದಿ ವಾಸವಾಗಿದ್ದುಕೊಂಡು ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ಮಾರಾಟದಲ್ಲಿ ತೊಡಗಿದ್ದರು.  ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕವಸ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಆಗಾಗ ತಾಯಿನಾಡದ ಕೇರಳಕ್ಕೆ ಹೋಗಿ ಅಲ್ಲಿ ಡ್ರಗ್ ಪೆಡ್ಲರ್ ಆದ ಅನ್ವರ್‍ನನ್ನು ಸಂಪರ್ಕ ಮಾಡಿ ಗಾಂಜಾ, ಎಂಡಿಎಂಎ, ಎಕ್ಟೆಸಿ ಮಾತ್ರೆಗಳು, ಎಲ್‍ಎಸ್‍ಡಿ ಇತ್ಯಾದಿಗಳನ್ನು ಕಡಿಮೆ ಬೆಲಗೆ ಖರೀದಿ ಮಾಡಿ ಬೆಂಗಳೂರಿಗೆ ತಂದು ಗೊತ್ತಿರುವ ಅಸಾಮಿಗಳಿಗೆ ಹಾಗು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಾ, ಸಾಮಾಜಿಕ ಸ್ವಾಸ್ಥ್ಯ ಕದಡುತ್ತಿರುವ ಅಂಶ ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿರುತ್ತದೆ.

ಆರೋಪಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಅಸಾಮಿಗಳ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿರುತ್ತದೆ.

ಈ ಕಾರ್ಯಾಚರಣೆ ಜಂಟಿ ಪೊಲೀಸ್ ಆಯುಕ್ತರು ಮತ್ತು ಉಪಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ, ಸಿಸಿಜಿಯ ಮಾದಕ ದ್ರವ್ಯ ನಿಗ್ರಹ ದಳದ ಸಹಾಯಕ ಪೊಲೀಸ್ ಆಯುಕ್ತ ರಾದ ಕೆ.ಸಿ.ಗೌತಮ್ ಅವರ ಮುಂದಾಳತ್ವದಲ್ಲಿ ಪೊಲೀಸ್ ಇನ್‍ಸ್ಪೆಕ್ಟರ್ ಎಂ.ಎಸ್.ಬೋಳೆತ್ತಿನ ಮತ್ತು ಸಿಬ್ಬಂದಿಗಳ ತಂಡ ಈ ಕಾರ್ಯಚರಣೆ ಕೈಗೊಂಡಿದ್ದರು.

Facebook Comments