ಕಲುಷಿತ ನೀರು ಸೇವಿಸಿ 6 ಸಾವು ಪ್ರಕರಣ : ಇಬ್ಬರು ಅಧಿಕಾರಿಗಳ ಅಮಾನತು

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯನಗರ, ಅ.6: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮಕರಡಿ ಗ್ರಾಮ ಪಂಚಾಯಿತಿ ಪಿಡಿಒ ಶರಣಪ್ಪ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಂಜಿನಿಯರ್ ವಿಜಯನಾಯಕ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಹಿರಿಯ ಐಎಎಸ್ ಅಧಿಕಾರಿ ಮನಿಷ್ ಮದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ. ಮಕರಬಿ ಗ್ರಾಪಂ ಪಿಡಿಒ ಅಮಾನತು ಮಾಡುತ್ತಿದ್ದಂತೆ ಗ್ರಾಮಸ್ಥರು ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.

ಪ್ರಕರಣದಲ್ಲಿ ದೊಡ್ಡ ದೊಡ್ಡವರ ಪಾತ್ರವಿದ್ದರೂ ಪಿಡಿಒ ಅವರನ್ನು ಮಾತ್ರ ಅಮಾನತು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸೂಕ್ತ ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Facebook Comments