ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಮಥುರಾ(ಪಿಟಿಐ), ಜೂ.16-ಕಾರು ಮತ್ತು ಟ್ರಕ್ ನಡುವೆ ಭೀಕರ ಡಿಕ್ಕಿಯಾಗಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟ ದುರ್ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಸಂಭವಿಸಿದೆ.  ಈ ಭೀಕರ ಅಪಘಾತದಲ್ಲಿ ಗಾಯಗೊಂಡಿರುವ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಮಥುರಾದಿಂದ ಆಗ್ರಾಗೆ ತೆರಳುತ್ತಿದ್ದ 9 ಜನರಿದ್ದ ಕಾರು ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಯಮುನಾ ಎಕ್ಸ್‍ಪ್ರೆಸ್ ಹೆದ್ದಾರಿಯ 140ನೆ ಮೈಲಿ ಬಳಿ ಟ್ರಕ್‍ಗೆ ಅಪ್ಪಳಿಸಿತು. ಈ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟರು.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಬಾಲ್‍ದೋಯಿ ಠಾಣೆ ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ