ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೇರಿಕೆ..!

ಈ ಸುದ್ದಿಯನ್ನು ಶೇರ್ ಮಾಡಿ

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಮೇ 30-ಡೆಡ್ಲಿ ಕೊರೊನಾ ವೈರಸ್ ಹಾವಳಿಯಿಂದ ವಿಶ್ವ ನಲುಗುತ್ತಿರುವಾಗಲೇ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ.  ವಿಶ್ವದ ಸುಮಾರು 250 ದೇಶಗಳಲ್ಲಿ ಕೋವಿಡ್-19 ವೈರಸ್‍ಗೆಈವರೆಗೆ3.67 ಲಕ್ಷ ಮಂದಿ ಬಲಿಯಾಗಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ 60 ಲಕ್ಷಕ್ಕೇರಿದೆ.

ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾಗಿದೆ.

ವಿಶ್ವದಲ್ಲಿಈವರೆಗೆ 26,61,269 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ. ಕಳೆದ 24 ತಾಸುಗಳಲ್ಲಿ ವಿಶ್ವದಾದ್ಯಂತ 1 ಲಕ್ಷಕ್ಕೂ ಅಧಿಕ ಮಂದಿಗೆ (ಸೋಂಕು ತಗುಲಿದೆ. ಕಳೆದ ಒಂದು ವಾರದಿಂದಲೂ ಜಗತ್ತಿನಾದ್ಯಂತ ಸರಾಸರಿ 1 ಲಕ್ಷ ಮಂದಿಗೆ ಸಾಂಕ್ರಾಮಿಕರೋಗ ಕಾಣಿಸಿಕೊಳ್ಳುತ್ತಿದೆ.

ಅಲ್ಲದೇ ದಿನ ನಿತ್ಯ ಪಾಸಿಟಿವ್ ಕೇಸ್‍ಗಳು ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಜಗತ್ತಿನಾದ್ಯಂತ ಈವರೆಗೆ 3,66,896 ಮಂದಿ ಸಾವಿಗೀಡಾಗಿದ್ದು, 60,034,667 ಸೋಂಕು ಪ್ರಕರಣಗಳು ವರದಿಯಾಗಿವೆ.

ಸಾಂಕ್ರಾಮಿಕ ರೋಗ ಪೀಡಿತರಲ್ಲಿ ಸುಮಾರು 53,730ಕ್ಕೂ ಮಂದಿ ಸ್ಥಿತಿ ಗಂಭೀರವಾಗಿದ್ದು, ಮರಣ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.  ಇಂದುರಾತ್ರಿ ವೇಳೆಗೆ ಮೃತರ ಸಂಖ್ಯೆ 3.70ಲಕ್ಷ ಮತ್ತು ಸೋಂಕಿತರ ಸಂಖ್ಯೆ61ಲಕ್ಷ ಮೀರುವ ಆತಂಕವಿದೆ. ಅಮೆರಿಕ,ಬ್ರೆಜಿಲ್, ರಷ್ಯಾ, ಸ್ಪೇನ್, ಮತ್ತುಇಂಗ್ಲೆಂಡ್ – ಅತಿ ಹೆಚ್ಚು ಸಾವು ಮತ್ತು ಸೋಂಕು ಸಂಭವಿಸಿದ ವಿಶ್ವದಟಾಪ್ ಫೈವ್ ದೇಶಗಳಾಗಿವೆ.

ಭಾರೀ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಲ್ಲಿ ಇಟಲಿ, ಫ್ರಾನ್ಸ್, ಜರ್ಮನಿ, ಭಾರತ ಮತ್ತುಟರ್ಕಿದೇಶಗಳಿವೆ. ಅತಿ ಹೆಚ್ಚು ಸೋಂಕು ಮತ್ತು ಸಾವು ಪಟ್ಟಿಯಲ್ಲಿ ಭಾರತ9ನೇ ಸ್ಥಾನದಲ್ಲಿದೆ. ಏಷ್ಯಾಖಂಡದಲ್ಲಿಚೀನಾ, ದಕ್ಷಿಣಕೊರಿಯಾ, ಪಾಕಿಸ್ತಾನ ಸೇರಿದಂತೆ ಅನೇಕ ದೇಶಗಳಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿಏರಿಕೆಯಾಗಿದೆ. ಕೊರೊನಾ ವೈರಸ್‍ಕೇಂದ್ರ ಬಿಂದುಚೀನಾದ ವುಹಾನ್ ನಗರದಲ್ಲಿಯೂ ಹೊಸ ಪಾಸಿಟಿವ್ ಕೇಸ್‍ಗಳು ಕಂಡುಬರುತ್ತಿವೆ.

Facebook Comments