65ನೇ ಹುಟ್ಟುಹಬ್ಬ ಆಚರಿಸಿಕೊಂಡ ಅಂಬಿ

ಈ ಸುದ್ದಿಯನ್ನು ಶೇರ್ ಮಾಡಿ

Ambarish--001

ಬೆಂಗಳೂರು, ಮೇ 29- ಕಲಿಯುಗ ಕರ್ಣ, ರೆಬಲ್ ಸ್ಟಾರ್ ಡಾ.ಅಂಬರೀಶ್ ಅವರು ತಮ್ಮ 65ನೇ ಹುಟ್ಟುಹಬ್ಬವನ್ನು ತಮ್ಮ ಕುಟುಂಬ ವರ್ಗದವರು, ಹಿತೈಷಿಗಳು ಹಾಗೂ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಆಚರಿಸಿಕೊಂಡರು.   ಮಧ್ಯರಾತ್ರಿಯಿಂದಲೇ ಕರ್ನಾಟಕದ ನಾನಾ ಭಾಗಗಳಿಂದ ಅಂಬಿ ಅವರ ನಿವಾಸದಲ್ಲಿ ಜಮಾಯಿಸಿದ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಷಯ ಕೋರಿದರು.  ಈ ಸಂದರ್ಭದಲ್ಲಿ ಅಂಬರೀಷ್ ಅವರಿಗೆ ಪೇಟಾ ತೊಡಿಸಿ, ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು.  ನಾಗರಹಾವು ಚಿತ್ರದ ಮೂಲಕ ಸ್ಯಾಂಡಲ್‍ವುಡ್ ಪಾದಾರ್ಪಣೆ ಮಾಡಿದ ಅಂಬರೀಶ್ ಅವರು ಒಲವಿನ ಉಡುಗೊರೆ , ಮಸಣದ ಹೂವು, ಪಡುವಾರಳ್ಳಿ ಪಾಂಡವರು, ರಂಗನಾಯಕಿ, ದಿಗ್ವಿಜಯ, ಮೃಗಾಲಯ, ಒಡಹುಟ್ಟಿದವರು ಹಲವಾರು ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

1982ರಲ್ಲಿ ಅಂತ ಸಿನಿಮಾದ ಅಭಿನಯಕ್ಕಾಗಿ ರಾಜ್ಯ ಪ್ರಶಸ್ತಿ ಲಭಿಸಿದೆ. ಫಿಲ್ಮ್‍ಫೇರ್ ಅವಾರ್ಡ್, ತೆಲುಗಿನ ಎಂಟಿಆರ್ ಅವಾರ್ಡ್, ನಂದಿ ಅವಾರ್ಡ್, ಜೀವಮಾನ ಸಾಧಕ ಪ್ರಶಸ್ತಿ ಪಡೆಯುವುದರೊಂದಿಗೆ ಸ್ಯಾಂಡಲ್‍ವುಡ್‍ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.   ಸಿನಿಮಾರಂಗ ಅಲ್ಲದೆ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ಅಂಬರೀಶ್ ಅವರು, ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿದ್ದರು. ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಅಂಬಿ ಪ್ರಸ್ತುತ ಶಾಸಕರಾಗಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.   ಅಂಬರೀಶ್ ಅವರ ಹುಟ್ಟುಹಬ್ಬಕ್ಕೆ ಚಿತ್ರರಂಗದ ಗಣ್ಯರು, ಹಲವು ನಾಯಕ ನಟರು ಹಾಗೂ ರಾಜಕೀಯ ಮುಖಂಡರು ಶುಭ ಹಾರೈಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin