ಭಾರತದಲ್ಲಿ ಕೋವಿಡ್ ಅಟ್ಟಹಾಸ : ಒಂದೇ ದಿನ ದಾಖಲೆಯ 6,654 ಮಂದಿಗೆ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಮೇ 23-ಭಾರತದಲ್ಲಿ ವಿನಾಶಕಾರಿ ಕೊರೊನಾ ವೈರಸ್ ಮತ್ತಷ್ಟು ತೀವ್ರ ಸ್ವರೂಪದಲ್ಲಿ ಸೋಟಗೊಂಡಿದೆ. ಸಾಂಕ್ರಾಮಿಕ ರೋಗದ ಪಾಸಿಟಿವ್ ಪ್ರಕರಣ ಆಘಾತಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

ನಿನ್ನೆ ಒಂದೇ ದಿನ ಅಂದರೆ 24 ತಾಸುಗಳ ಅವಯಲ್ಲಿ 6,654 (ನಿನ್ನೆ 6,088 ಕೇಸ್) ಜನರಿಗೆ ಸೋಂಕು ದೃಢಪಟ್ಟಿದ್ದು. ಇದು ಸಾಂಕ್ರಾಮಿಕ ರೋಗ ಉಲ್ಬಣದಲ್ಲಿ ಭಾರೀ ಜಿಗಿತವಾಗಿದ್ದು, ಹೊಸ ದಾಖಲೆಯಾಗಿದೆ. ಇದೇ ಅವಯಲ್ಲಿ ಒಟ್ಟು 137 ಮಂದಿ ಸಾವಿಗೀಡಾಗಿದ್ದಾರೆ.

ಕಿಲ್ಲರ್ ವೈರಸ್ ಆರ್ಭಟ ಲಾಕ್‍ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಭಾರತದಲ್ಲಿ ಸಾವಿನ ಸಂಖ್ಯೆ 3,720 ದಾಟಿದ್ದು. ಸೋಂಕು ಪೀಡಿತರ ಸಂಖ್ಯೆ 1.25 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದು ಸರಾಸರಿ 5,500 ಪಾಸಿಟಿವ್ ಕೇಸ್ ದಾಖಲಾದ ಸತತ ಏಳನೆ ದಿನ. ಅಲ್ಲದೇ 6,000 ಸೋಂಕು ಪ್ರಕರಣಗಳು ದಾಖಲಾದ ಸತತ ಎರಡನೇ ದಿನ. ಮೇ 1ರಿಂದಲೂ ಅತಿ ಹೆಚ್ಚು ಸೋಂಕು ಪ್ರಕರಣಗಳು ದೇಶದ ವಿವಿಧ ರಾಜ್ಯಗಳಲ್ಲಿ ವರದಿಯಾಗುತ್ತಲೇ ಇದ್ದು, ದಿನೇ ದಿನೇ ಆಘಾತಕಾರಿ ಮಟ್ಟದಲ್ಲಿ ಉಲ್ಬಣಗೊಳ್ಳುತ್ತಿದೆ.

ನಿನ್ನೆ ಬೆಳಗ್ಗೆ 8 ಗಂಟೆಯಿಂದ 24 ಗಂಟೆಗಳ ಅವಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 137 ಮಂದಿಯನ್ನು ಕಿಲ್ಲರ್ ಕೊರೊನಾ ಬಲಿ ತೆಗೆದುಕೊಂಡಿದೆ. ಮಹಾರಾಷ್ಟ್ರದಲ್ಲಿ 63, ಗುಜರಾತ್‍ನಲ್ಲಿ 29, ದೆಹಲಿ ಮತ್ತು ಉತ್ತರಪ್ರದೇಶ ತಲಾ 14, ಪಶ್ಚಿಮ ಬಂಗಾಳ 6, ತಮಿಳುನಾಡು 4, ರಾಜಸ್ತಾನ, ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶ ತಲಾ 2 ಹಾಗೂ ಹರಿಯಾಣ ರಾಜ್ಯದಲ್ಲಿ ಒಂದು ಸಾವು ಪ್ರಕರಣ ವರದಿಯಾಗಿದೆ.

ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ದೇಶದಲ್ಲಿ ಡೆಡ್ಲಿ ಕೋವಿಡ್-19 ವೈರಸ್‍ಗೆ ಬಲಿಯಾದವರ ಸಂಖ್ಯೆ 3,720ಕ್ಕೇರಿದ್ದು, ಸಾಂಕ್ರಾಮಿಕ ರೋಗಿಗಳ ಸಂಖ್ಯೆ 1.25 ತಲುಪಿದೆ. ಇಂದು ಮಧ್ಯರಾತ್ರಿಯೊಳಗೆ ಸೋಂಕಿತರ ಪ್ರಮಾಣ 1.30 ಲಕ್ಷ ದಾಟುವ ಆತಂಕವೂ ಇದೆ.

ಲಾಕ್‍ಡೌನ್ ಸಡಿಲ ನಂತರ ದೇಶದ ವಿವಿಧ ರಾಜ್ಯಗಳಲ್ಲಿ ಕೊರೊನಾ ಮಹಾಸೋಟವಾಗಿದ್ದು, ಸಾವು-ಸೋಂಕು ವ್ಯಾಪಕವಾಗಿ ಉಲ್ಬಣಗೊಂಡಿದೆ. ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ಶೇ.41.39ರಷ್ಟು ಸುಧಾರಣೆ ಕಂಡುಬಂದಿದ್ದರೂ, ಮತ್ತೊಂದೆಡೆ ದಿನನಿತ್ಯ ಮರಣ ಮತ್ತು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.

ಈವರೆಗೆ ಸಂಭವಿಸಿರುವ 3,720 ಸಾವು ಪ್ರಕರಣಗಳಲ್ಲಿ, ಮಹಾರಾಷ್ಟ್ರ ಎಂದಿನಂತೆ ಪ್ರಥಮ ಸ್ಥಾನದಲ್ಲಿಯೇ ಮುಂದುವರಿದಿದೆ. ಆ ರಾಜ್ಯದಲ್ಲಿ ಒಟ್ಟು 1,517 ಸಾವುಗಳು ಸಂಭವಿಸಿದ್ದು, 44,583 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಎರಡನೇ ಸ್ಥಾನದಲ್ಲಿರುವ ಗುಜರಾತ್‍ನಲ್ಲಿ 802 ಸಾವುಗಳು ಸಂಭವಿಸಿವೆ. ನಂತರದ ಸ್ಥಾನಗಳಲ್ಲಿ ಮಧ್ಯಪ್ರದೇಶ (272), ಪಶ್ಚಿಮ ಬಂಗಾಳ (265), ದೆಹಲಿ (208). ರಾಜಸ್ತಾನ (153), ಉತ್ತರ ಪ್ರದೇಶ (152), ತಮಿಳುನಾಡು (99), ಆಂಧ್ರಪ್ರದೇಶ (55), ತೆಲಂಗಾಣ (45), ಕರ್ನಾಟಕ(41), ತೆಲಂಗಾಣ (40) ಹಾಗೂ ಪಂಜಾಬ್ (39) ರಾಜ್ಯಗಳಿವೆ.

ಜಮ್ಮು-ಕಾಶ್ಮೀರ 20, ಹರಿಯಾಣ 16, ಬಿಹಾರ 11, ಒಡಿಶಾ ಏಳು, ಕೇರಳ ಮತ್ತು ಅಸ್ಸಾಂ ತಲಾ ನಾಲ್ಕು, ಜಾರ್ಖಂಡ್, ಚಂಡಿಗಢ, ಮತ್ತು ಹಿಮಾಚಲ ಪ್ರದೇಶ ತಲಾ ಮೂರು, ಹಾಗೂ ಪುದುಚೇರಿ, ಮೇಘಾಲಯ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ತಲಾ ಒಂದೊಂದು ಸಾವುಗಳು ವರದಿಯಾಗಿವೆ.

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, 69,597ರಷ್ಟಿದೆ. ಈ ಮಧ್ಯೆ, ಈವರೆಗೆ 51,783(ಚೇತರಿಕೆ ಪ್ರಮಾಣ ಶೇ.41.39) ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ವೈರಾಣು ಸೋಂಕಿನಿಂದ ಗುಣಮುಖರಾಗುತ್ತಿರುವ ವರ ಸಂಖ್ಯೆಯಲ್ಲಿ ವೃದ್ಧಿ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾದರೂ, ಮತ್ತೊಂದಡೆ ಸೋಂಕು ಮತ್ತು ಸಾವು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ.

ಇಂದು ಬೆಳಗ್ಗೆಯೂ ಕೆಲವು ರಾಜ್ಯಗಳಲ್ಲಿ ಸಾವು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಳ, ದೆಹಲಿ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್, ಓಡಿಶಾ ಮತ್ತಿತರ ರಾಜ್ಯಗಳಲ್ಲಿ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಹೆಮ್ಮಾರಿ ನಿಗ್ರಹಕ್ಕಾಗಿ ಕೆಲವು ನಿರ್ಬಂಧಗಳ ಸಡಿಲಿಕೆಯೊಂದಿಗೆ ನಾಲ್ಕನೇ ಹಂತದ ಲಾಕ್‍ಡೌನ್ ಜಾರಿಯಲ್ಲಿದ್ದು, ಇದರ ಬೆನ್ನಲ್ಲೇ ಆತಂಕಕಾರಿ ವಾತಾವರಣವೂ ನಿರ್ಮಾಣವಾಗಿದೆ.

Facebook Comments

Sri Raghav

Admin