7ಕೆಜಿ ಶ್ರೀಗಂಧ ವಶ : ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

arrested

ಚಿಕ್ಕಮಗಳೂರು, ಸೆ.6- ದ್ವಿಚಕ್ರ ವಾಹನದಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಸವನಹಳ್ಳಿ ಠಾಣೆ ಪೊಲೀಸರು ಬಂಧಿಸಿ 7ಕೆಜಿ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.ಕೆಂಪನಹಳ್ಳಿ ವಾಸಿ ರಂಗನಾಥ್(45) ಹಾಗೂ ಕಲ್ಯಾಣನಗರ ವಾಸಿ ಉಮೇಶ್(44) ಬಂಧಿತರು.ರಾತ್ರಿ ದ್ವಿಚಕ್ರವಾಹನದಲ್ಲಿ 13 ಸಾವಿರ ರೂ. ಮೌಲ್ಯದ 7 ಕೆಜಿ ಶ್ರೀಗಂಧವನ್ನು ಸಾಗಿಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin