7 ನಿವೃತ್ತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್

ಈ ಸುದ್ದಿಯನ್ನು ಶೇರ್ ಮಾಡಿ

Bengaloirh

ಬೆಂಗಳೂರು,ಆ.10-ರಾಜಕಾಲುವೆ ಒತ್ತುವರಿಗೆ ಕಾರಣರಾಗಿದ್ದ ಏಳು ಮಂದಿ ನಿವೃತ್ತ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು.   ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿಗೆ ಕಾರಣರಾಗಿದ್ದ ಅಧಿಕಾರಿಗಳ ಪೈಕಿ ಏಳು ಮಂದಿ ಅಧಿಕಾರಿಗಳು ಸೇವೆಯಿಂದ ನಿವೃತ್ತರಾಗಿದ್ದಾರೆ.   ಈಗ ಅಂಥ ಅಧಿಕಾರಿಗಳನ್ನು ಅಮಾನತು ಮಾಡಲು ಸಾಧ್ಯವಿಲ್ಲ. ಆದರೆ ಕಾನೂನು ರೀತಿ ಆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.    ಇದಕ್ಕೆ ಕಾರಣರಾದ ಅಧಿಕಾರಿಗಳು ಸೇವೆಯಲ್ಲಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು.  ಅಂಥವರನ್ನು ಅಮಾನತುಗೊಳಿಸಿ ಕಾನೂನಿನ ರೀತಿಯ ಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದರು.  ಒತ್ತುವರಿ ಕಾರ್ಯಾಚರಣೆಯಲ್ಲಿ ಕೆಲವು ಅಮಾಯಕರು ಮನೆಗಳನ್ನು ಕಳೆದುಕೊಂಡಿರ ಬಹುದು. ಆದರೆ ಇದಕ್ಕೆ ಸರ್ಕಾರ ಕಾರಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

► Follow us on –  Facebook / Twitter  / Google+

 

Facebook Comments

Sri Raghav

Admin