ರಾಜ್ಯದಲ್ಲಿ ನಿನ್ನೆ ಒಂದೇ ದಿನ 7,293 ಮಂದಿಗೆ ಕೊರೋನಾ ಟೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 21- ರಾಜ್ಯದಲ್ಲಿ ನಿನ್ನೆ ಒಂದೇ ದಿನ 7,293 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಇದು ದಾಖಲೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು ರಾಜ್ಯದಲ್ಲಿ ಕೋವಿಡ್-19 ಪರೀಕ್ಷಾ ಸಾಮಥ್ರ್ಯವನ್ನು ನಿರಂತರವಾಗಿ ಹೆಚ್ಚಿಸಿಕೊಳ್ಳಲಾಗಿದೆ. ನಿನ್ನೆ ಒಂದೇ ದಿನ 7293 ಪರೀಕ್ಷೆಗಳನ್ನು ನಡೆಸಲಾಗಿದೆ.

ಇದುವರೆಗಿನ ಅತ್ಯಧಿಕ ಪರೀಕ್ಷೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಸದ್ಯ ರಾಜ್ಯದಲ್ಲಿ 53 ಪರೀಕ್ಷಾ ಲ್ಯಾಬ್‍ಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ತಿಂಗಳ ಅಂತ್ಯದವರೆಗೆ 60 ಲ್ಯಾಬ್‍ಗಳನ್ನು ಹೊಂದುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Facebook Comments

Sri Raghav

Admin