74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ (Live updates)

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.15 : ಕೊರೊನಾ ಆತಂಕದ ನಡುವೆಯೂ ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನವನ್ನು  ಆಚರಿಸುತ್ತಿದ್ದು, ಕೆಂಪುಕೋಟೆಯಲ್ಲಿ ಸಂಭ್ರಮ ಮನೆ ಮಾಡಿದ್ದು ಪ್ರಧಾನಿ ಧ್ವಜಾರೋಹಣ ನೆರವೇರಿಸಿದರು. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ.

# ಸ್ವಾತಂತ್ರ್ಯ ದಿನಾಚರಣೆ ಈ ಬಾರಿ ಕೊವಿಡ್ 19 ರೋಗದಿಂದಾಗಿ ಕಳೆಗುಂದಿದೆ. ಸಾರ್ವಜನಿಕರು ಗುಂಪು ಸೇರದೇ ಆಚರಣೆ ನಡೆಯುತ್ತಿರುವುದು ಇದೇ ಮೊದಲು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೀಮಿತ ಸಂಖ್ಯೆಯಲ್ಲಿ ಮಾತ್ರ ಜನರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

# ಮಹಾಮಾರಿ ಕರೊನಾ ವೈರಸ್​ ನಡುವೆಯೂ ರಾಷ್ಟ್ರವು ಇಂದು 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್​ ಸಂಕಷ್ಟ ಕಾಲದಲ್ಲಿ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ.

# ಇಂದು ಬೆಳಿಗ್ಗೆ 7.18ರ ಸುಮಾರಿಗೆ ಕೆಂಪುಕೋಟೆಗೆ ಆಗಮಿಸಿದ ಪ್ರಧಾನಮಂತ್ರಿ ನರಂದ್ರ ಮೋದಿಯವರನ್ನು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಕಾರ್ಯದರ್ಶಿ ಡಾ.ಅಜಯ್ ಕುಮಾರ್, ಲೆಫ್ಟಿನೆಂಟ್ ಜನರಲ್ ವಿಜಯ್ ಕುಮಾರ್ ಮಿಶ್ರಾ ಅವರು ಸ್ವಾಗತಿಸಿದರು. ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೂರು ರಕ್ಷಣಾ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು.

# ಮೊದಲಿಗೆ ದೇಶದ ಸಮಸ್ತ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ, ನಾವಿಂದು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ಲಕ್ಷಾಂತರ ಜನರ ತ್ಯಾಗವಿದೆ. ನಮ್ಮ ಸೇನೆ ಭಾರತ ಮಾತೆಯನ್ನು ರಕ್ಷಿಸುತ್ತಿದೆ. ವೀರರ ತ್ಯಾಗ ಬಲಿದಾನದಿಂದಾಗಿ ನಾವಿಂದು ಸಂಭ್ರಮ ಪಡುತ್ತಿದ್ದೇವೆ ಎಂದು ದೇಶಕ್ಕೆ ಸ್ವತಂತ್ರ ತಂದುಕೊಟ್ಟವರನ್ನು ಮೊದಲು ಸ್ಮರಿಸಿದರು.

# ಕರೊನಾ ವಾರಿಯರ್ಸ್​ ಸುದೀರ್ಘ ಸಮಯದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದ ಧರ್ಮ ಎಂಬಂತೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶ್ಲಾಘಿಸಿದ ಮೋದಿ, ಕರೊನಾ ನಡುವೆ ದೇಶವು ಅನೇಕ ಪ್ರಾಕೃತಿಕ ವಿಕೋಪಗಳನ್ನು ಎದುರಿಸುವಂತಾಗಿದೆ. ದೇಶದ 130 ಕೋಟಿ ಜನರ ಸಂಕಲ್ಪದಿಂದಾಗಿ ಕರೊನಾವನ್ನು ಜಯಿಸಲಿದ್ದೇವೆ ಎಂದರು.

Facebook Comments

Sri Raghav

Admin