75 ಬಿಜೆಪಿ ನಾಯಕರಿಗೆ ಕೊರೋನಾ ಸೋಂಕು..!

ಈ ಸುದ್ದಿಯನ್ನು ಶೇರ್ ಮಾಡಿ

ಪಾಟ್ನಾ, ಜು.14- ಕೊರೊನಾ ಸುಳಿಯಲ್ಲಿ ಬಿಹಾರ ಬಿಜೆಪಿ ಸಿಲುಕಿದ್ದು, ಬರೋಬ್ಬರಿ 75 ಕಮಲ ನಾಯಕರಿಗೆ ಸೋಂಕು ತಗುಲಿರುವುದು ದೃಢವಾಗಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ನಾಥ್, ಸಚಿವ ದಿನೇಶ್ ಕುಮಾರ್, ರಾಜೇಶ್ ವರ್ಮಾ, ರಾಧಾ ಮೋಹನ್ ಶರ್ಮಾ ಸೇರಿದಂತೆ 75 ಬಿಜೆಪಿ ನಾಯಕರ ಕೋವಿಡ್ ವರದಿ ಇಂದು ಪಾಸಿಟಿವ್ ಬಂದಿದೆ.

ಒಟ್ಟು 100 ಮಂದಿ ಬಿಜೆಪಿ ನಾಯಕರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

# ಅನಿಲ್ ಬೆನಕೆಗೆ ಕೊರೊನಾ ವೈರಸ್ :
ಬೆಂಗಳೂರು, ಜು.14- ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಅವರಿಗೂ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಕೊರೊನಾ ವೈರಸ್ ಹಾವಳಿಗೆ ಸಾಮಾನ್ಯ ಜನರಷ್ಟೇ ಅಲ್ಲ ಮುಖ್ಯಮಂತ್ರಿ ಆದಿಯಾಗಿ ಸಚಿವರು ಮತ್ತು ಶಾಸಕರು ಹಾಗೂ ರಾಜಕೀಯ ಮುಖಂಡರು ಸಹ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜು.13ರಂದು ಶಾಸಕರ ಜನ್ಮದಿನವಾಗಿದ್ದು ತಮ್ಮ ನಿವಾಸದಲ್ಲಿಯೇ ಅನಿಲ್ ಬೆನಕೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಸೋಂಕಿತ ಲಕ್ಷಣ ಕಂಡು ಬಂದಿದ್ದು, ಶಾಸಕರನ್ನು ಹೋಮ್ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರಿಗೂ ಸೋಂಕು ತಗಲಿರುವುದು ದೃಢಪಟ್ಟಿತ್ತು.

ಈಗಾಗಲೇ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೂ ಕೊರೊನಾವೈರಸ್ ಸೋಂಕಿನ ಭೀತಿ ಎದುರಾಗಿದೆ. ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್‍ನಲ್ಲಿ ಇರುವ ಸಚಿವರ ಸಂಬಂಧಿಕರೊಬ್ಬರಿಗೆ ಕೊವಿಡ್-19 ಸೋಂಕು ತಗಲಿರುವುದು ಆತಂಕವನ್ನು ಹುಟ್ಟಿಸಿದೆ.

ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ, ನನ್ನ ಸಂಬಂಧಿಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಅವರ ಜತೆ ಸಂಪರ್ಕದಲ್ಲಿ ಇದ್ದ, ನಾನು ಹಿರೇಕೆರೂರಿನ ಮನೆಯಲ್ಲಿ ಕ್ವಾರಂಟೈನ್ ಆಗುತ್ತಿದ್ದು, ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ ಎಂದು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದರು.

 

Facebook Comments

Sri Raghav

Admin